ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಕ್ಷೇತ್ರದಾದ್ಯಂತ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಬಸ್ ಪ್ರಯಾಣಕ್ಕಾಗಿ ಮಳೆಗಾಲ ಹಾಗೂ ಬೇಸಿಗೆಯಲ್ಲಿ ರಸ್ತೆ ಹಾಗೂ ಅಂಗಡಿ ಮುಗ್ಗಂಟುಗಳ ಆಶ್ರಯ ಪಡೆಯುವ ತೊಂದರೆ ತಪ್ಪಿಸುವ ನಿಟ್ಟಿನಲ್ಲಿ ಹಲವಾರು ಗ್ರಾಮ ಪಟ್ಟಣಗಳಲ್ಲಿ ನೂತನ ಬಸ್ ನಿಲ್ದಾಣಗಳನ್ನು ನಿರ್ಮಾಣಗೊಳಿಸಲಾಗಿದ್ದು ಸಾರ್ವಜನಿಕರು ಸ್ವಚ್ಛತೆ ಕಾಪಾಡುವ ಮೂಲಕ ಅವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಸಿದ್ದು ಸವದಿ ಹೇಳಿದರು.
ಚಿಮ್ಮಡ ಗ್ರಾಮದ ರಬಕವಿ ಮಹಾಲಿಂಗಪೂರ ರಸ್ತೆಯಲ್ಲಿ ಶಾಸಕರ ಪ್ರದೇಶಾಭಿವೃದ್ದಿ ನಿಧೀಯ ಸುಮಾರು ೧೦ ಲಕ್ಷ ರೂ. ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಸೋಮವಾರ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು ಬಹುದಿನಗಳ ಬೇಡಿಕೆಯಾಗಿರುವ ಈ ಬಸ್ ನಿಲ್ದಾಣವನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಲಾಗಿದ್ದು ಗ್ರಾಮ ಪಂಚಾಯತಿಯವರು ಹಾಗೂ ಸಾರ್ವಜನಿಕರು ಸ್ವಚ್ಛತೆಯೊಂದಿಗೆ ಉಪಯೋಗಿಸಬೇಕು, ಕ್ಷೇತ್ರವ್ಯಾಪ್ತಿಯಲ್ಲಿ ಇನ್ನೂ ಎಲ್ಲೆಲ್ಲಿ ಅಗತ್ಯವಿವೆಯೋ ಅಲ್ಲೆಲ್ಲ ಶಾಸಕರ ಹಾಗೂ ಸಂಸದರ ಅನುದಾನದಲ್ಲಿ ಬಸ್ ತಂಗುದಾಣಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದೆಂದರು.
ಗ್ರಾ.ಪಂ. ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ ಮಾತನಾಡಿದರು.
ಶ್ರೀ ಪ್ರಭು ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು.
ಜಿ.ಪಂ. ಮಾಜಿ ಸದಸ್ಯ ಪರಶುರಾಮ ಬಸವ್ವಗೋಳ, ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪ ಪೂಜಾರಿ, ಬಾಳಪ್ಪ ಹಳಿಂಗಳಿ, ರಾಮಣ್ಣ ಬಗನಾಳ, ರಾಚಯ್ಯ ಮಠಪತಿ, ಬೀರಪ್ಪ ಹಳೆಮನಿ, ಆನಂದ ಕವಟಿ, ಪ್ರಭು ಮುಧೋಳ, ಅವ್ವನಪ್ಪ ಮುಗಳಖೋಡ, ಮಹಾಂತೇಶ ಜಾಲಿಕಟ್ಟಿ, ಅಮಜದಖಾನ ಜಮಖಂಡಿ ಸೇರಿದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು.

