ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜುಲೈ ೯ರ ಗುರುವಾರ ಸಂಜೆ ೬ ಗಂಟೆಗೆ ‘ಸ್ವಾತಂತ್ರ‍್ಯದ ಓಟ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಶಿವಮೊಗ್ಗ ರಂಗಾಯಣದ ಪ್ರಸ್ತುತಿಯಾದ ಈ ನಾಟಕವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬೋಳುವಾರು ಮಹಮ್ಮದ್ ಕುಂಞ ಅವರ ಕಾದಂಬರಿಯನ್ನು ಆಧರಿಸಿದೆ. ಈ ಕಾರ್ಯಕ್ರಮವನ್ನು ವಿಜಯಪುರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯಪುರದ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶಿವಮೊಗ್ಗ ರಂಗಾಯಣ ಜಂಟಿಯಾಗಿ ಹಮ್ಮಿಕೊಳ್ಳಲಾಗಿದೆ.
ನಾಟಕಕ್ಕೆ ನಟರಾಜ್ ಹೊನ್ನವಳ್ಳಿ ಅವರು ನಿರ್ದೇಶನ ಮಾಡಿದ್ದು, ರಾಘವ ಕಮ್ಮಾರ ಅವರ ಸಂಗೀತ ನಿರ್ದೇಶನ ನೀಡಿದ್ದಾರೆ. ಈ ರಂಗ ಪ್ರಯೋಗದ ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹಾಸಿಂಪೀರ ವಾಲಿಕಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ್ ಭೋವಿ, ಇಳಕಲ್ ರಂಗಸಮಾಜದ ಸದಸ್ಯರಾದ ಮಹಾಂತೇಶ್ ಗಜೇಂದ್ರಗಡ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಹೇಶ್ ಪೋತದಾರ್ ಅವರು ಉಪಸ್ಥಿತರಿರಲಿದ್ದಾರೆ. ಎಂದು ಶಿವಮೊಗ್ಗ ರಂಗಾಯಣದ ಆಡಳಿತಾಧಿಕಾರಿಗಳಾದ ಡಾ. ಶೈಲಜಾ ಎ.ಸಿ. ತಿಳಿಸಿದ್ದಾರೆ. ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿದ್ದು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಙತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
