Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಣತಿ ನಮೂನೆ ವಿತರಣೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಅಗತ್ಯ
(ರಾಜ್ಯ ) ಜಿಲ್ಲೆ

ಗಣತಿ ನಮೂನೆ ವಿತರಣೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಅಗತ್ಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಎಲ್‌ಒಗಳಿಗೆ ಸಹಕಾರ ನೀಡಲು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-೨೦೨೬ರ ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯದಲ್ಲಿ ನಿರತರಾಗಿದ್ದು, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಅವರಿಗೆ ಅಗತ್ಯ ಸಹಕಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಎಸ್‌ಐಆರ್-೨೦೨೬ ಕುರಿತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಖ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಎಲ್‌ಒಗಳು ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಕೈಗೊಂಡಿದ್ದಾರೆ. ಈ ಕಾರ್ಯವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಸಹಕರಿಸಬೇಕಿದ್ದು, ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಹೇಳಿದರು. ಮತದಾರರ ಪಟ್ಟಿಯಲ್ಲಿರುವವರು ಮೃತಪಟ್ಟಿದ್ದರೆ, ಸ್ಥಳಾಂತರಗೊಂಡಿದ್ದರೆ ಅಥವಾ ಬೇರೆ ಕಾರಣಗಳಿಂದ ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಅಗತ್ಯವಿದ್ದರೆ, ಸಂಬಂಧಿಸಿದ ಬಿಎಲ್‌ಒಗಳಿಗೆ ಮಾಹಿತಿ ನೀಡಬೇಕು. ಮೃತಪಟ್ಟಿರುವ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಮರಣ ಪ್ರಮಾಣಪತ್ರ ಅಥವಾ ಅದು ಲಭ್ಯವಿಲ್ಲದಿದ್ದಲ್ಲಿ ಕುಟುಂಬದ ಸದಸ್ಯರ ಲಿಖಿತ ಮಾಹಿತಿಯನ್ನು ಸಲ್ಲಿಸಬೇಕು ಎಂದು ಸೂಚಿಸಿದರು.
ಗಣತಿ ನಮೂನೆಗಳಲ್ಲಿ ಮಾಹಿತಿ ಅಪೂರ್ಣವಾಗಿದ್ದರೆ ಅಥವಾ ತಪ್ಪು ಮಾಹಿತಿ ದಾಖಲಾಗಿದ್ದರೆ, ಮುಂದಿನ ಹಂತದಲ್ಲಿ ಸಂಬಂಧಿತ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು (ಎಆರ್‌ಒಗಳು) ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಸ್ಥಳಾಂತರಗೊಂಡಿರುವ ಮತದಾರರ ಸಂಖ್ಯೆ ಹೆಚ್ಚಿರುವುದರಿಂದ ಗೊಂದಲಗಳು ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಬಿಎಲ್‌ಒಗಳ ಕಾರ್ಯಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.
ಗಣತಿ ನಮೂನೆಗಳನ್ನು ಕನ್ನಡ ಅಥವಾ ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಲು ಅವಕಾಶವಿದ್ದು, ಭಾಷೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಒಂದಕ್ಕಿಂತ ಹೆಚ್ಚು ಹೆಸರು ಮತದಾರರ ಪಟ್ಟಿಯಲ್ಲಿ ಕಂಡುಬಂದರೆ, ಸಂಬಂಧಿಸಿದ ಮತದಾರರಿಗೆ ಮಾಹಿತಿ ನೀಡಿ ಒಂದು ಕಡೆ ಮಾತ್ರ ಹೆಸರು ಉಳಿಸಿ, ಉಳಿದ ಪಟ್ಟಿಗಳಿಂದ ಹೆಸರು ತೆಗೆದುಹಾಕಲು ಬಿಎಲ್‌ಒಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಅಭಿಷೇಕ್ ಸೆಹರಾ ವಿಜಯಪುರ ತಹಶೀಲ್ದಾರ್ ಪ್ರಶಾಂತ ಚನ್ನಗೊಂಡ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ

ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಕೇಂದ್ರವೇ ಮಾಡೋದಾದ್ರೆ ರಾಜ್ಯದ ಪಾತ್ರವೇನು :ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಆಲಮೇಲ‌ ಪಪಂ ಅಧ್ಯಕ್ಷ ಸುಂಬಡ ವಿರುದ್ಧ ಅವಿಶ್ವಾಸ ನಿರ್ಣಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.