Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿಎಸ್‌ಪಿ ಬಂಧನ
(ರಾಜ್ಯ ) ಜಿಲ್ಲೆ

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿಎಸ್‌ಪಿ ಬಂಧನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದ್ಯೋಗ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂ. ವಂಚನೆ | ವಿಜಯಪುರ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಮಾರ್ಗದರ್ಶನದಲ್ಲಿ ಸೆರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತಾನು ಡಿಎಸ್‌ಪಿ ಎಂದು ಹೇಳಿಕೊಂಡು ಖಾಕಿ ಸಮವಸ್ತ್ರ ಧರಿಸಿ ನಿರುದ್ಯೋಗಿ ಯುವಕರಿಗೆ ಪೊಲೀಸ್ ಹಾಗೂ ಪಿಎಸ್‌ಐ ಸೇರಿದಂತೆ ವಿವಿಧ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ನಡೆಸಿದ ಆರೋಪದಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಜಯಪುರ ಜಿಲ್ಲಾ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತನನ್ನು ಗ್ಯಾನನಗೌಡ @ ಜ್ಞಾನಗೌಡ @ ಗಣೇಶ @ ಸಿ. ಸಂಪತ್‌ಕುಮಾರ (31), ವರಗೋಡದಿನ್ನಿ ಗ್ರಾಮ, ಹುನಗುಂದ ತಾಲೂಕು, ಬಾಗಲಕೋಟೆ ಜಿಲ್ಲೆ ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, 2014ರ ಮಾರ್ಚ್ 29ರಂದು ವಿಜಯಪುರ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಅಪಹರಣ, ಕೊಲೆ ಯತ್ನ ಹಾಗೂ ವಂಚನೆ ಪ್ರಕರಣ ದಾಖಲಾಗಿತ್ತು. 2012ರಲ್ಲಿ ಕಾಖಂಡಕಿ ಗ್ರಾಮದ ವಿಠ್ಠಲ ಛಾಯಾಗೋಳ ಅವರ ಸಂಬಂಧಿಕನಿಗೆ ಪೊಲೀಸ್ ಉದ್ಯೋಗ ಕೊಡಿಸುವುದಾಗಿ ಹೇಳಿ ಆರೋಪಿಯು ಸುಮಾರು ₹1.20 ಲಕ್ಷ ಪಡೆದುಕೊಂಡಿದ್ದನು. ಬಳಿಕ ಉದ್ಯೋಗ ಕೊಡಿಸದೇ ಹಣ ವಾಪಸ್ ಕೇಳಿದಾಗ, ದೂರುದಾರನನ್ನು ಕಾರಿನಲ್ಲಿ ಅಪಹರಿಸಿ, ಹಲ್ಲೆ ನಡೆಸಿ, ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸಮೀಪದ ಹುಲಗಿ ಗ್ರಾಮದ ಕಾಲುವೆಯಲ್ಲಿ ಕೈಗಳಿಗೆ ಬೇಡಿ ಹಾಕಿ, ಕಾಲು ಕಟ್ಟಿ ಗೋಣಿಚೀಲದಲ್ಲಿ ಹಾಕಿ ನೀರಿಗೆ ಎಸೆದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಕರಣದ ತನಿಖೆ ವೇಳೆ ಆರೋಪಿಯೊಂದಿಗೆ ಒಬ್ಬ ಮಹಿಳೆ ಸೇರಿ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದರಿಂದ ಪ್ರಕರಣವನ್ನು ಎಲ್‌ಪಿಆರ್ (Long Pending Register) ಎಂದು ಪರಿಗಣಿಸಲಾಗಿತ್ತು.
ಈ ನಡುವೆ 2026ರಲ್ಲಿ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದ್ದು, ತಾನು ಡಿಎಸ್‌ಪಿ ಎಂದು ಹೇಳಿಕೊಂಡು ಜೈಲರ್ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮುದ್ದೇಬಿಹಾಳ ತಾಲೂಕಿನ ಹಂದ್ರಾಳ ಗ್ರಾಮದ ವ್ಯಕ್ತಿಯಿಂದ ₹8 ಲಕ್ಷ ಪಡೆದು ವಂಚಿಸಿರುವ ಆರೋಪವೂ ಇದೆ.
ಆರೋಪಿಯ ಪತ್ತೆಯನ್ನು ಆದ್ಯತೆಯಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ, ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಎಪಿಎಂಸಿ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ ತಿಪ್ಪರೆಡ್ಡಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.
ಆರೋಪಿ ವಿವಿಧ ಹೆಸರುಗಳು ಹಾಗೂ ಮೊಬೈಲ್ ಸಂಖ್ಯೆಗಳ ಬಳಸಿ ತನ್ನ ಗುರುತು ಮರೆಮಾಚಿಕೊಂಡು ವಿವಿಧ ಊರುಗಳಲ್ಲಿ ಸಂಚರಿಸುತ್ತಿದ್ದನು. ತಾಂತ್ರಿಕ ಮಾಹಿತಿ ಹಾಗೂ ಮೊಬೈಲ್ ಲೊಕೇಷನ್ ಆಧರಿಸಿ ಪೊಲೀಸರು ಆತನನ್ನು ಜುಲೈ 6, 2026ರಂದು ಬೆಂಗಳೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪೊಲೀಸರ ಪ್ರಕಾರ, 2012ರಿಂದ ಮುದ್ದೇಬಿಹಾಳ, ಎಪಿಎಂಸಿ, ಆದರ್ಶನಗರ ಹಾಗೂ ತಾಳಿಕೋಟೆ ಪೊಲೀಸ್ ಠಾಣೆಗಳಲ್ಲಿ ಆರೋಪಿಯ ವಿರುದ್ಧ ವಂಚನೆ, ಸುಳ್ಳು ಗುರುತು ಬಳಕೆ, ಅಪಹರಣ, ಕೊಲೆ ಯತ್ನ ಹಾಗೂ ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ.
ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ತನಿಖಾ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಶ್ಲಾಘಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
  • ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ನೆಪದಲ್ಲಿ ಮತದಾರರ ಹಕ್ಕು ಕಸಿವ ಕುತಂತ್ರ
    In (ರಾಜ್ಯ ) ಜಿಲ್ಲೆ
  • 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿಎಸ್‌ಪಿ ಬಂಧನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.