Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
(ರಾಜ್ಯ ) ಜಿಲ್ಲೆ

ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಅಧಿಕಾರಿಗಳಿಗೆ ಎಚ್ಚರಿಕೆ

ಕಲಬುರಗಿ: ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಗಳವಾರ ಪ್ರಸ್ತಾವಿಕ ಭಾಷಣ ಮಾಡಿದ ಸಿಎಂ ಅವರು, ಜನಪರ ಕೆಲಸ ಮಾಡದ ಅಧಿಕಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದರು. ಉತ್ತರ ಕರ್ನಾಟಕದ ಮೊದಲ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು.
ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ ಮತ್ತು ಕಟ್ಟಕಡೆಯ ವ್ಯಕ್ತಿಗೂ ಅವರ ನಾಗರಿಕ ಹಕ್ಕುಗಳನ್ನು ತಲುಪಿಸುವುದು ನನ್ನ ಸರ್ಕಾರದ ಪ್ರಮುಖ ಗುರಿ. ಈ ಗುರಿ ಸಾಧಿಸಲು ಅಧಿಕಾರಿ ವರ್ಗ ಅತ್ಯಂತ ಕ್ರಿಯಾಶೀಲ, ಜನಪರ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು” ಎಂದು ತಿಳಿಸಿದರು.
ನಾನು ಬಸವಾದಿ ಶರಣರ ಸಮಾನತೆಯ ತತ್ವವನ್ನು ನಂಬುವವನು. ಆದ್ದರಿಂದಲೇ ನನ್ನ ಮೊದಲ ಉತ್ತರ ಕರ್ನಾಟಕ ಪ್ರವಾಸವನ್ನು ಬಸವಕಲ್ಯಾಣದಿಂದ ಆರಂಭಿಸಿದ್ದೇನೆ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿ ಒಂದೇ ವೇಗದಲ್ಲಿ ಸಾಗಬೇಕು” ಎಂದು ಹೇಳಿದರು.
ಬೀದರ್, ಕಲ್ಬುರ್ಗಿ ಜಿಲ್ಲೆಯ ಜನತೆ ನೀಡಿರುವ ಅಭೂತಪೂರ್ವ ಬೆಂಬಲ, ಪ್ರೀತಿ ಮತ್ತು ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, “ಜನತೆ ನಮ್ಮ ಮೇಲೆ ಇಟ್ಟಿರುವ ನಂಬಿಕೆಯೇ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ನಮ್ಮನ್ನು ಈ ಸ್ಥಾನದಲ್ಲಿ ಕೂರಿಸಿರುವವ ಜನತೆಯ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯ” ಎಂದರು.
“ನಿಮ್ಮ ಕಾರ್ಯಕ್ಷಮತೆ ಉತ್ತಮವಾಗಿದ್ದರೆ ನಾಡಿನ ಜನತೆಯ ಋಣ ತೀರಿಸಿದಂತಾಗುತ್ತದೆ. ಆದರೆ ಜನಪರವಾಗಿ ಕೆಲಸ ಮಾಡದಿದ್ದರೆ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುವುದು ನನಗೆ ಅನಿವಾರ್ಯವಾಗುತ್ತದೆ” ಎಂದು ಅವರು ಎಚ್ಚರಿಕೆ ನೀಡಿದರು.

ಮತದಾನದ ಹಕ್ಕು ರಕ್ಷಿಸುವುದು ಸರ್ಕಾರದ ಜವಾಬ್ದಾರಿ

ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಮಾತನಾಡಿದ ಮುಖ್ಯಮಂತ್ರಿಯವರು, “ಒಬ್ಬನೇ ಒಬ್ಬ ಅರ್ಹ ಮತದಾರ ತನ್ನ ಮತದಾನದ ಹಕ್ಕು ಕಳೆದುಕೊಳ್ಳಬಾರದು. ಇಲ್ಲಿ ರಾಜಕಾರಣ ಮುಖ್ಯವಲ್ಲ, ಆದರೆ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ರಕ್ಷಿಸುವುದು ಸರ್ಕಾರದ ಜವಾಬ್ದಾರಿ. ಬಿಎಲ್ಒಗಳು ಪ್ರತಿಯೊಂದು ಮನೆಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಿ ಅರ್ಹ ಮತದಾರರ ಹೆಸರನ್ನು ಉಳಿಸುತ್ತಾರೆಯೇ ಎಂಬುದರ ಮೇಲೆ ನಿಗಾ ವಹಿಸಬೇಕು. ಈ ವಿಚಾರದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ” ಎಂದು ಸೂಚಿಸಿದರು.

ಅಂತರರಾಜ್ಯ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ರಾಜ್ಯದ ಅಭಿವೃದ್ಧಿ ಮತ್ತು ನೀರಿನ ನಿರ್ವಹಣೆ ಕುರಿತು ಮಾತನಾಡಿದ ಅವರು, “ದೇಶಾದ್ಯಂತ ಮಳೆಯ ಅಭಾವದ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ರಾಜ್ಯದ ಪರಿಸ್ಥಿತಿ ಸಮಾಧಾನಕರವಾಗಿದೆ. ಅಂತರರಾಜ್ಯ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರೊಂದಿಗೆ ಐತಿಹಾಸಿಕ ಮಟ್ಟದ ಚರ್ಚೆ ನಡೆಸಿದ್ದೇವೆ.
ಕೃಷ್ಣ, ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆ ಯೋಜನೆಯನ್ನು ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಮುಂದುವರಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರವೂ ಸಕಾರಾತ್ಮಕ ಸ್ಪಂದನೆ ನೀಡಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ರಾಜ್ಯದ ಜನರ ಹಿತಾಸಕ್ತಿ ರಕ್ಷಣೆ ಆದ್ಯತೆಯಾಗಿಸಿ ಒಟ್ಟಾಗಿ ಕೆಲಸ ಮಾಡಲು ತೀರ್ಮಾನಿಸಿದ್ದೇವೆ” ಎಂದರು.

BIJAPUR NEWS bjp congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.