ಉದಯರಶ್ಮಿ ದಿನಪತ್ರಿಕೆ
ಎಚ್ ಡಿ ಕೋಟೆ: ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟದ ವತಿಯಿಂದ ತಾಲೂಕಿನ ಅಂಕನಾಥಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್ ಹಾಗೂ ಕಲಿಕಾ ಸಾಮಗ್ರಿಗಳನ್ನು ನೀಡಲಾಯಿತು.
ತಾಲೂಕಿನ ನಿರ್ದೇಶಕ ಶಿವಕುಮಾರ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದುವ ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಉಚಿತವಾಗಿ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ನು, ಪೆನ್ಸಿಲ್‌ಗಳನ್ನು ವಿತರಣೆ ಮಾಡಿದ್ದೇವೆ. ವಿದ್ಯಾರ್ಥಿಗಳು ಇದರ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧನೆ ಮಾಡಿ ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸುವ ಕೆಲಸವನ್ನು ಶಿಕ್ಷಕರು, ಮನೆಯಲ್ಲಿ ಪೋಷಕರು ಮಾಡಬೇಕು, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಲ್ಲೂ ಸಹ ಹೆಚ್ಚಿನ ಪ್ರತಿಭೆ ಇರುತ್ತದೆ ಅವರಿಗೆ ಸೂಕ್ತವಾದ ಮಾರ್ಗದರ್ಶನ ನೀಡಬೇಕು. ಸಂಘ-ಸಂಸ್ಥೆ, ದಾನಿಗಳು ನೀಡುವ ಕೊಡುಗೆಗಳನ್ನು ಸದ್ಬಳಕೆ ಮಾಡಿಕೊಂಡು ಜೀವನದಲ್ಲಿ ಸಾಧನೆ ಮಾಡಬೇಕು, ಆ ಮೂಲಕ ತಮ್ಮ ಉಜ್ವಲ ಭವಿಷ್ಯದ ಜತೆಗೆ ಸಮಾಜಕ್ಕೂ ಕೊಡುಗೆಯಾಗಬೇಕು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಡಾ. ಅಚ್ಚುತರಾವ್, ವೆಂಕಟೇಶ್ ಬಾಬು, ರಾಧಾ ಸೇರಿದಂತೆ ಶಾಲಾ ಮುಖ್ಯಪಾಧ್ಯಾಯರು, ಶಿಕ್ಷಕರು, ಮಕ್ಕಳು ಹಾಜರಿದ್ದರು.

