ದೇವರಹಿಪ್ಪರಗಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕ ದೇವರಹಿಪ್ಪರಗಿ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳ ರೈತರಿಂದ ಪಾದಯಾತ್ರೆ ಹಾಗೂ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಅ.೨೫ರಂದು ದೇವರಹಿಪ್ಪರಗಿ ತಾಲ್ಲೂಕಿನ ಕೋರವಾರ ಗ್ರಾಮದ ಹನುಮಾನ ದೇವಸ್ಥಾನದಿಂದ ಆರಂಭಗೊಳ್ಳುವ ಬೃಹತ್ ಪಾದಯಾತ್ರೆ ಜಾಲವಾದ ಮಣೂರ, ದೇವೂರ ಗ್ರಾಮಗಳ ಮೂಲಕ ತೆರಳಿ ದೇವರಹಿಪ್ಪರಗಿ ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ಸಭೆ ಸೇರಿ ಪ್ರತಿಭಟನೆ ನಡೆಸಲಿದೆ.
ರೈತರ ಸಂಪೂರ್ಣ ಸಾಲಮನ್ನಾ, ಬರಗಾಲ ನಿಮಿತ್ಯ ತುರ್ತು ಪರಿಹಾರ ಘೋಷಣೆ, ಕಬ್ಬಿಗೆ ಬೆಂಬಲ ಬೆಲೆ, ಬೆಳೆ ಪರಿಹಾರ ಹಾಗೂ ಬೆಳೆವಿಮೆ ಪರಿಹಾರ, ಗೋಶಾಲೆ ಆರಂಭ, ವಿದ್ಯುತ್ ಪೂರೈಕೆ ಸೇರಿದಂತೆ ರೈತರ ಒಟ್ಟು ೧೧ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪಾದಯಾತ್ರೆ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಾರಣ ತಾಲ್ಲೂಕಿನ ಎಲ್ಲಾ ಗ್ರಾಮಗಳ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ರೈತಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಈರಪ್ಪ ಕುಳೇಕುಮಟಗಿ ಹಾಗೂ ಗೌರವಾಧ್ಯಕ್ಷ ಶಿವಾನಂದ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment