ಮತದಾರರ ಪಟ್ಟಿ ಪರಿಷ್ಕರಣೆ | ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಆನಂದ ಕೆ. ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ-೨೦೨೬ ರ ಅಂಗವಾಗಿ ಶೇ.೧೦೦ ರಷ್ಟು ಮನೆ ಮನೆ ಭೇಟಿ ನೀಡಿ ಮತ್ತು ಗಣಕೀಕರಣ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಜುಲೈ ೧೧ ಮತ್ತು ೧೨ ರಂದು ಜಿಲ್ಲಾದ್ಯಂತ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ತಿಳಿಸಿದ್ದಾರೆ.
ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಹಾಗೂ ಯಾವುದೇ ಅನರ್ಹ ಮತದಾರರು ಸೇರ್ಪಡೆಯಾಗಬಾರದು ಎಂಬ ಧೈಯದೊಂದಿಗೆ “SIಖ-೨೦೨೬ ಇಚಿಡಿಟಥಿ ಖeಚಿಛಿh ಚಿಟಿಜ ೧೦೦% ಆigiಣisಚಿಣioಟಿ ಅಚಿmಠಿಚಿigಟಿ” ಅನ್ನು ಹಮ್ಮಿಕೊಳ್ಳಲಾಗಿದೆ.
ಈ ವಿಶೇಷ ಅಭಿಯಾನ ದಿನಗಳಂದು ಜಿಲ್ಲೆಯ ಎಲ್ಲಾ ಮತಗಟ್ಟೆ ಅಧಿಕಾರಿಗಳು (ಬಿಎಲ್‌ಓ) ಬೆಳಿಗ್ಗೆ ೮:೩೦ ಗಂಟೆಯಿಂದಲೇ ಕಡ್ಡಾಯವಾಗಿ ಮನೆ-ಮನೆಗೆ ಭೇಟಿ ನೀಡಿ ಎನ್ಯೂಮರೇಷನ್ ಗಣತಿ ನಮೂನೆಗಳನ್ನು ವಿತರಿಸಲಿದ್ದಾರೆ. ದಿನಗೂಲಿ ಕಾರ್ಮಿಕರು, ಕಾರ್ಖಾನೆ ಕಾರ್ಮಿಕರು, ಸರ್ಕಾರಿ ಹಾಗೂ ಖಾಸಗಿ ಸಿಬ್ಬಂದಿ ಮತ್ತು ವ್ಯಾಪಾರಸ್ಥರು ಹಗಲೊತ್ತಿನಲ್ಲಿ ಮನೆಯಲ್ಲಿ ಲಭ್ಯವಿರುವುದಿಲ್ಲ. ಆದ್ದರಿಂದ ಅಂತಹ ಉದ್ಯೋಗಸ್ಥರು ಮನೆಯಲ್ಲಿ ಇರುವ ಸಮಯವನ್ನು ಗುರುತಿಸಿ, ಅವರಿಗೆ ಮೊದಲ ಆದ್ಯತೆಯ ಮೇರೆಗೆ ಗಣತಿ ನಮೂನೆಗಳನ್ನು ವಿತರಿಸಲು ಮತ್ತು ಶೇ.ನೂರರಷ್ಟು ಗಣಕೀಕರಣ ಮಾಡಲು ಕ್ರಮವಹಿಸಲಾಗಿದೆ.
ಬೂತ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಏಜೆಂಟರೊಂದಿಗೆ (ಬಿಎಲ್‌ಎ) ಸಮನ್ವಯ ಸಾಧಿಸಿ ಪ್ರತ ಮತದಾರನನ್ನು ತಲುಪಲಿದ್ದಾರೆ. ಅಗತ್ಯವಿದ್ದಲ್ಲಿ ಮತದಾರರಿಗೆ ಫಾರ್ಮ್ ಭರ್ತಿ ಮಾಡುವ ಕುರಿತು ಸೂಕ್ತ ಮಾರ್ಗದರ್ಶನ ನೀಡಿ, ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ನಮೂನೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಪ್ರತಿ ಮನೆಗೂ ಗಣತಿ ನಮೂನೆ ತಲುಪಿರುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ನೋಡಲ್ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ನಿರಂತರವಾಗಿ ಮೇಲ್ವಿಚಾರಣೆ ನಡೆಸಲಿದ್ದಾರೆ. ಅಧಿಕಾರಿಗಳು ಪ್ರತಿದಿನದ ಪ್ರಗತಿ ವರದಿಯನ್ನು ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗೆ ಸಲ್ಲಿಸಲಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಈ ಅಭಿಯಾನ ಯಶಸ್ವಿಗೊಳಿಸಲು ಸಹಕರಿಸುವಂತೆಯೂ ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

