ವಿಜಯಪುರ ಜಿಲ್ಲೆಯ ಎಲ್ಲ ತಾಲೂಕುಗಳ ತಹಸೀಲ್ದಾರರಿಗೆ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)–೨೦೨೬ರ ಕಾರ್ಯವನ್ನು ನಿಗದಿತ ವೇಳಾಪಟ್ಟಿಯಂತೆ ಪರಿಣಾಮಕಾರಿಯಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಿಲ್ಲೆಯ ಎಲ್ಲ ತಾಲೂಕು ತಹಶೀಲ್ದಾರರೊಂದಿಗೆ ನಡೆಸಿದ ವಿಡಿಯೋ ಸಂವಾದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ತಹಸೀಲ್ದಾರರು ತಮ್ಮ ಲಾಗಿನ್‌ಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಃಐಔ) ಂSಆಆ (ಂbseಟಿಣ, Shiಜಿಣeಜ,ಆuಠಿಟiಛಿಚಿಣe,ಆeಚಿಣh) ಸಂಬಂಧಿಸಿದಂತೆ ಭರ್ತಿ ಮಾಡಿ ಸಲ್ಲಿಸಿರುವ ವಿವರಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು ಹಾಗೂ ಅದಕ್ಕೆ ತಕ್ಕಂತೆ ಪೂರಕ ದಾಖಲೆಗಳನ್ನು ಖಾತ್ರಿಪಡಿಸಿಕೊಳ್ಳಬೇಕು.
ಂSಆಆ ಮತದಾರರ ವಿವರಗಳನ್ನು ಸಂಬಂಧಿತ ಬೂತ್ ಮಟ್ಟದ ಏಜೆಂಟರಿಗೆ (ಃಐಂ) ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನಿಯಮಾನುಸಾರ ಒದಗಿಸಿರುವ ಕುರಿತು ಮಾಹಿತಿ ಪಡೆಯಬೇಕು. ಈ ಇಡೀ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಪೂರ್ಣಗೊಳಿಸಬೇಕು.
ಡಿಜಿಟಲೀಕರಣಕ್ಕೆ ಚುರುಕು: ಗಣತಿ ನಮೂನೆಗಳ ವಿತರಣೆಯ ಪ್ರಗತಿ ಹಾಗೂ ಡಿಜಿಟಲೀಕರಣದ (ಆigiಣizಚಿಣioಟಿ) ಕಾರ್ಯವನ್ನು ತ್ವರಿತಗೊಳಿಸಿ, ಯಾವುದೇ ಬಾಕಿ ಉಳಿಯದಂತೆ ಕ್ರಮ ಕೈಗೊಳ್ಳಬೇಕು. ಮನೆಮನೆಗೆ ಭೇಟಿ ನೀಡಿ ನಮೂನೆಗಳನ್ನು ವಿತರಿಸುವ ಹಾಗೂ ಸ್ವೀಕರಿಸಿದ ನಮೂನೆಗಳನ್ನು ತಕ್ಷಣವೇ ಡಿಜಿಟಲೀಕರಣಗೊಳಿಸುವ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು.
ಜುಲೈ ೧೧, ೧೨ ರಂದು ವಿಶೇಷ ಅಭಿಯಾನ: ಜುಲೈ ೧೧ ಮತ್ತು ೧೨ರಂದು ನಡೆಯಲಿರುವ ವಿಶೇಷ ಅಭಿಯಾನ ಯಶಸ್ವಿಯಾಗಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರನ್ನು ಸಂಪರ್ಕಿಸಿ, ಗಣತಿ ನಮೂನೆಗಳ ವಿತರಣೆ, ಸ್ವೀಕಾರ ಹಾಗೂ ಅಗತ್ಯ ತಿದ್ದುಪಡಿ ಕಾರ್ಯಗಳನ್ನು ಚುರುಕುಗೊಳಿಸಬೇಕು.
ದೂರು ಮತ್ತು ಆಕ್ಷೇಪಣೆಗಳ ವಿಲೇವಾರಿ: ಮತದಾರರಿಂದ ಸಲ್ಲಿಕೆಯಾಗುವ ಹಕ್ಕು ಮಂಡನೆಗಳು ಮತ್ತು ಆಕ್ಷೇಪಣೆಗಳು ನಿಗದಿತವಾಗಿ ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಆಗುವಂತೆ ಕ್ರಮ ಕೈಗೊಳ್ಳಬೇಕು. ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸಲಹೆ ಹಾಗೂ ಸಹಕಾರ ನೀಡಬೇಕು.
ಗೌರವಧನ ವಿತರಣೆ: ಬೂತ್ ಮಟ್ಟದ ಅಧಿಕಾರಿಗಳ ಬಿಎಲ್‌ಒ ಅವರಿಗೆ ನೀಡಲಾಗುವ ಗೌರವಧನವನ್ನು ಯಾವುದೇ ವಿಳಂಬವಿಲ್ಲದೆ, ಸಮಯಕ್ಕೆ ಸರಿಯಾಗಿ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯಲ್ಲಿ ೧೮,೩೧,೬೯೬ ಗಣತಿ ನಮೂನೆ ವಿತರಣೆ
ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭಗೊಂಡಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು ಜೂ.೨೯ ರಿಂದ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಭರದಿಂದ ನಡೆದಿದ್ದು, ಇಲ್ಲಿಯವರೆಗೆ ಜಿಲ್ಲೆಯ ಪ್ರಗತಿ ವರದಿಯ ಪ್ರಕಾರ ಇಲ್ಲಿಯವರೆಗೆ ೧೮,೩೧,೬೯೬ ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ. ಅವುಗಳಲ್ಲಿ ೪,೫೦,೧೫೮ ಗಣಕೀಕರಣಗೊಂಡ ಗಣತಿ ನಮೂನೆಗಳಿವೆ. ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ತಿಳಿಸಿದ್ದಾರೆ.
೧೬ ಜೂನ್ ೨೦೨೫ರ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ಒಟ್ಟು ೧೯,೮೨,೧೧೪ ಮತದಾರರು ದಾಖಲಾಗಿದ್ದಾರೆ. ಇವರಿಗೆ ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸಿ, ಅಗತ್ಯ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ ಎಂದವರು ತಿಳಿಸಿದ್ದಾರೆ.
ಗಣತಿ ನಮೂನೆಗಳ ವಿತರಣೆ ಮತ್ತು ಡಿಜಿಟಲೀಕರಣ ಕಾರ್ಯವು ಜೂನ್.೩೦ ರಿಂದ ಜುಲೈ.೨೯ ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ ದಾಖಲೆಗಳೊಂದಿಗೆ ನಮೂನೆಗಳನ್ನು ಸಲ್ಲಿಸಬಹುದಾಗಿದೆ.
೧,೫೨೮ ಮತದಾರರು ಆನ್ ಲೈನ್ ಮೂಲಕ ಗಣತಿ ನಮೂನೆಗಳನ್ನು ಸಲ್ಲಿಸಿದ್ದಾರೆ. ೨,೧೪೧ ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ. ೩,೨೭೬ ಮತದಾರರು ಮೃತಪಟ್ಟಿದ್ದಾರೆ. ೮೨೪ ಮತದಾರರು ಈಗಾಗಲೇ ನೋಂದಾಯಿಸಿಕೊಂಡಿರುವುದು ಪರಿಶೀಲನೆಯಲ್ಲಿ ಕಂಡುಬಂದಿದೆ ಎಂದವರು ಸಂಗ್ರಹಿಸಲಾಗದ ಅಥವಾ ಗೈರುಹಾಜರಾಗಿರುವ ಮತದಾರರ ೫೫ ಹಾಗೂ ೪೪ ಇತರೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

