ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಜಿಲ್ಲಾ ನೋಂದಣಾಧಿಕಾರಿಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳು ಜುಲೈ ೧೨ ರಂದು (ಭಾನುವಾರ) ಎಂದಿನಂತೆ ಕಾರ್ಯನಿರ್ವಹಿಸಲಿವೆ.
ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು, ಬೆಂಗಳೂರು ಅವರ ನಿರ್ದೇಶನದಂತೆ ಭಾನುವಾರವೂ ನೋಂದಣಿ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸಲು ಸೂಚನೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಹಿರಿಯ ಉಪ ನೋಂದಣಿ ಕಚೇರಿ, ವಿಜಯಪುರ, ಉಪ ನೋಂದಣಿ ಕಚೇರಿ ಬಸವನ ಬಾಗೇವಾಡಿ, ಉಪ ನೋಂದಣಿ ಕಚೇರಿ ಇಂಡಿ, ಉಪ ನೋಂದಣಿ ಕಚೇರಿ ಸಿಂದಗಿ, ಉಪ ನೋಂದಣಿ ಕಚೇರಿ ಮುದ್ದೇಬಿಹಾಳ ಹಾಗೂ ಉಪ ನೋಂದಣಿ ಕಚೇರಿ ತಿಕೋಟಾ ಜುಲೈ ೧೨ರಂದು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಆದ್ದರಿಂದ ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡೆದು ತಮ್ಮ ನೋಂದಣಿ ಸಂಬಂಧಿತ ಕೆಲಸಗಳನ್ನು ಸಂಬಂಧಿತ ಉಪ ನೋಂದಣಿ ಕಚೇರಿಗಳಲ್ಲಿ ನಿರ್ವಹಿಸಿಕೊಳ್ಳುವಂತೆ ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
