ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮತದಾರರಿಗೆ ಗಣತಿ ನಮೂನೆಗಳನ್ನು ಭರ್ತಿ ಮಾಡುವ ಅನೂಕೂಲಕ್ಕಾಗಿ ಪ್ರತಿ ವಾರ್ಡ್ ನಲ್ಲಿ ಮತದಾರರ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಅವರು ತಿಳಿಸಿದ್ದಾರೆ.
ಮಹಾನಗರ ಪಾಲಿಕೆಯ ಘನತ್ಯಾಜ್ಯ ವಾಹನಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಧ್ವನಿ ಮುದ್ರಣ ಮೂಲಕ ಪ್ರಚಾರ ಮಾಡಲಾಗುತ್ತಿದೆ. ವಿಜಯಪುರ ನಗರ ಪ್ರದೇಶದಲ್ಲಿ ಈ ಮೊದಲು ವಾಸವಿದ್ದ ಸ್ಥಳದ ಮತದಾರ ಪಟ್ಟಿಯಲ್ಲಿ ಹೆಸರು ದಾಖಲೆಯಿದ್ದು, ಹೊಸ ಬಡಾವಣೆಗೆ ಸ್ಥಳಾಂತರಗೊಂಡ ಮತದಾರರು ಈ ಹಿಂದೆ ವಾಸವಿದ್ದ ಭಾಗದ ಮತದಾರರ ಪಟ್ಟಿಯಲ್ಲಿ ವಿಳಾಸವನ್ನು ಬದಲಾಯಿಸದೆ ಇರುವುದು ಕಂಡುಬಂದಿರುತ್ತದೆ. ಆದ್ದರಿಂದ ತಮ್ಮ ಮನೆಗಳಿಗೆ ಗಣತಿ ನಮೂನೆಗಳು ತಲುಪದೇ ಇದ್ದಲ್ಲಿ ಸಂಬಂಧಪಟ್ಟ ವಾರ್ಡನಲ್ಲಿ ಸ್ಥಾಪಿಸಲಾಗಿರುವ ಮತದಾರರ ಸಹಾಯ ಕೇಂದ್ರ ಕ್ಕೆ ಭೇಟಿ ನೀಡಬಹುದಾಗಿದೆ.
ಇಲ್ಲವೇ ಪಾಲಿಕೆ ಚುನಾವಣಾ ವಿಭಾಗದ ಮತದಾರರ ಸಹಾಯ ವಾಣಿ ಸಂಖ್ಯೆ : ೦೮೩೫೨-೨೦೦೪೨೫ ಕರೆ ಮಾಡಿ ತಮ್ಮ ಮತದಾರ ಗುರುತಿನ ಚೀಟಿ ಸಂಖ್ಯೆ ಹೇಳಿದರೆ ಸಂಬಂದಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಗಣತಿ ನಮೂನೆಗಳನ್ನು ವಿತರಿಸಲು ಕ್ರಮವಹಿಸಲಾಗುವದು ಎಂದು ಮಹಾನಗರ ಪಾಲಿಕೆ ಆಯುಕ್ತರ ಪ್ರಕಟಣೆ ತಿಳಿಸಿದೆ.

