ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ೨೦೨೭–೨೮ನೇ ಶೈಕ್ಷಣಿಕ ಸಾಲಿನ ೬ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಜವಾಹರ ನವೋದಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಯು ನವೆಂಬರ್ ೨೮ ರಂದು ನಡೆಯಲಿದ್ದು. ಅರ್ಜಿ ಸಲ್ಲಿಸಲು ಜುಲೈ ೩೧ ಕೊನೆಯ ದಿನವಾಗಿದೆ. hಣಣಠಿs://ಟಿಚಿvoಜಚಿಥಿಚಿ.gov.iಟಿ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರನ್ನು ಸಂಪರ್ಕಿಸಬಹುದಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯ ಪ್ರಾಚಾರ್ಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
