ಉದಯರಶ್ಮಿ ದಿನಪತ್ರಿಕೆ
ಬೆಂಗಳೂರು: ಕನ್ನಡಪ್ರಭ ದಿನಪತ್ರಿಕೆಯ ಸಂಪಾದಕರಾಗಿ ನೇಮಕಗೊಂಡಿರುವ ಗಿರೀಶ್ ರಾವ್ ಹತ್ವಾರ್ (ಜೋಗಿ) ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಜೋಗಿ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕನ್ನಡಪ್ರಭ ಪ್ರಧಾನ ಸಂಪಾದಕರಾದ ರವಿ ಹೆಗಡೆ, ಇಂಡಿಯನ್ ಫೆಡರೇಷನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಖಜಾಂಚಿ ವಾಸುದೇವ ಹೊಳ್ಳ ಹಾಗೂ ರಾಯಚೂರಿನ ಸಿದ್ದು ಬಿರಾದಾರ ಉಪಸ್ಥಿತರಿದ್ದರು.
ಕ್ರೀಯಾಶೀಲ ಪತ್ರಕರ್ತರಾದ ಜೋಗಿ ಅವರ ಸಂಪಾದಕೀಯ ಪಯಣ ಇನ್ನಷ್ಟು ಯಶಸ್ವಿಯಾಗಲಿ ಎಂದು ಕೆಯುಡಬ್ಲ್ಯೂಜೆ ಪದಾಧಿಕಾರಿಗಳು ಶುಭ ಹಾರೈಸಿದರು.

