Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ಆರೋಪ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರದ ಭಾಗವಾಗಿ ಶಾಶ್ವತ ರಹವಾಸಿ ಪ್ರಮಾಣಪತ್ರ ಪ್ರಕ್ರಿಯೆ ಆರಂಭಿಸಲು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ, ಇಷ್ಟು ದಿನ ಈ ಪ್ರಕ್ರಿಯೆ ನೆನಪಾಗಲಿಲ್ಲವೇ? ಈಗ ಎಸ್‌ಐಆರ್ ನಡೆದಿರುವಾಗ ಇದರ ಔಚಿತ್ಯವೇನಿತ್ತು ಎಂದು ಬಿಜೆಪಿ ಮುಖಂಡ ಕೃಷ್ಣಾ ಗುನ್ನಾಳಕರ ಖಾರವಾಗಿ ಪ್ರಶ್ನಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ವಲಸಿಗರಿಗೆ ರಕ್ಷಣೆ ನೀಡುವ ಎಂಬ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಈ ಪಿಆರ್‌ಸಿ ಎಂಬ ಪ್ರಕ್ರಿಯೆ ಜಾರಿಗೆ ತರುತ್ತಿದೆ, ಇಲ್ಲಿರುವ ಅಕ್ರಮ ವಲಸಿಗರಿಗೆ ಶಾಶ್ವತ ರಹವಾಸಿ ಪ್ರಮಾಣ ಪತ್ರ ನೀಡುವ ಮೂಲಕ ತನ್ನ ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ, ಈ ರೀತಿ ಅಕ್ರಮ ವಲಸಿಗರಿಗೆ ಈ ರೀತಿಯ ರಕ್ಷಣೆ ದೊರಕಿದರೆ ಅವರು ಇಲ್ಲಿ ಶಾಶ್ವತವಾಗಿ ನೆಲೆಸಲು ಬಲ ನೀಡಲಿದೆ, ಇದು ರಾಷ್ಟ್ರದ ಭದ್ರತೆಗೆ ದೊಡ್ಡ ಅಪಾಯವಾಗಿದೆ, ಕೂಡಲೇ ಈ ಅವೈಜ್ಞಾನಿಕ ಪ್ರಕ್ರಿಯೆಯನ್ನು ಕೈ ಬಿಡಬೇಕು ಎಂದರು.
ಈ ಅವೈಜ್ಞಾನಿಕ ಹಾಗೂ ತರ್ಕರಹಿತ ಪ್ರಕ್ರಿಯೆಯ ಬಗ್ಗೆ ಕೇಂದ್ರದ ಅನೇಕ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಯಾವ ರಾಜ್ಯದಲ್ಲಿಯೂ ಸಹ ಶಾಶ್ವತ ರಹವಾಸಿ ಪತ್ರ ನೀಡುವುದಿಲ್ಲ, ಇದು ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿಯಲ್ಲಿಯೂ ಇಲ್ಲ, ಇದೊಂದು ಸಂವಿಧಾನ ಬಾಹಿರ ಪ್ರಕ್ರಿಯೆ ಎಂದು ಗುನ್ನಾಳಕರ ಹೇಳಿದರು.
ಕಾಂಗ್ರೆಸ್ ಪಕ್ಷದವರು ಅತ್ಯಂತ ಸರಳವಾಗಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ಇನ್ನಷ್ಟೂ ಕಠಿಣಗೊಳಿಸುವ ಕಾರ್ಯ ಮಾಡಿ ಗೊಂದಲ ಸೃಜಿಸುತ್ತಿದ್ದಾರೆ, ಶಾಶ್ವತ ರಹವಾಸಿ ಪ್ರಮಾಣ ಪತ್ರ ಎಂಬ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ, ಶಾಶ್ವತ ರಹವಾಸಿ ಪ್ರಮಾಣ ಪತ್ರ ಈಗ ನೀಡುವ ಔಚಿತ್ಯವೇನಿತ್ತು? ರಾಷ್ಟಿçÃಯ ಭದ್ರತೆಗೆ ಇದು ದೊಡ್ಡ ಅಪಾಯಕಾರಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಜಲಸಂಪನ್ಮೂಲ ಸಚಿವ ಸ್ಥಾನ ವಿಜಯಪುರದವರಿಗೆ ನೀಡಿ
ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಮಹಾರಾಷ್ಟ್ರದಲ್ಲಿ ಮಳೆ ಸುರಿಯುತ್ತಿದೆ, ಆಲಮಟ್ಟಿ ಜಲಾಶಯದಲ್ಲಿ ನೀರು ಹರಿದು ಬರುತ್ತಿದೆ, ಆದರೂ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ, ಬೆಂಗಳೂರಿನವರು ನೀರಾವರಿ ಮಂತ್ರಿಯಾದರೆ ಯಾವ ಪ್ರಯೋಜನವಾಗುವುದಿಲ್ಲ, ಹೀಗಾಗಿ ವಿಜಯಪುರ ಭಾಗದವರು ಜಲಸಂಪನ್ಮೂಲ ಸಚಿವರಾಗಬೇಕು, ಆಲಮಟ್ಟಿ ಜಲಾಶಯದ ಸಮಸ್ಯೆ ಮುಖ್ಯಮಂತ್ರಿ ಹಾಗೂ ಬೆಂಗಳೂರಿನವರಾದ ಜಲಸಂಪನ್ಮೂಲ ಸಚಿವರಿಗೆ ಅರ್ಥವಾಗುವುದೇ ಇಲ್ಲ. ಹೀಗಾಗಿ ನಮ್ಮ ವಿಜಯಪುರದವರಿಗೆ ಈ ಖಾತೆ ವಹಿಸಿ ಎಂದರು. ವಿಶೇಷ ಪ್ರಕರಣ ಎಂದು ವಿಜಯಪುರ ಜನತೆಗೆ ಜಲಾಶಯದಿಂದ ನೀರು ಬಿಡುಗಡೆ ಮಾಡಿಸುವ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕು ಎಂದರು.
ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಸಾಬು ಮಾಶ್ಯಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವೂರ, ಮಾಧ್ಯಮ ಪ್ರಮುಖ ವಿಜಯ ಜೋಶಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026
    In ದಿನಪತ್ರಿಕೆ
  • ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ
    In (ರಾಜ್ಯ ) ಜಿಲ್ಲೆ
  • ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜ್ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಜಿ.ಪಂ-ತಾ.ಪಂ ಚುನಾವಣೆ: ಅಲ್ಪಸಂಖ್ಯಾತರಿಗೆ‌ ಪ್ರಾತಿನಿಧ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.