ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ಬಲ ತುಂಬಿದ್ದು, ಬಡ ಕುಟುಂಬಗಳ ಬದುಕಿಗೆ ಹೊಸ ಆಶಾಕಿರಣವಾಗಿವೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸಂತೋಷ್ ಗಣಾಚಾರಿ ತಿಳಿಸಿದ್ದಾರೆ.
ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿಯ ಉಪಾಧ್ಯಕ್ಷೆ ಮಹಾದೇವಿ ಗೋಕಾಕ ಅವರು ಮಾತನಾಡಿ, ಸರ್ಕಾರ ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರಲ್ಲಿ ಗ್ಯಾರಂಟಿ ಯೋಜನೆಗಳು ಅತ್ಯಂತ ಪರಿಣಾಮಕಾರಿ ಆಗಿವೆ ಎಂದು ಹೇಳಿದರು.
ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದು ಬಡವರು ಹಾಗೂ ಮಹಿಳೆಯರ ಜೀವನಮಟ್ಟ ಸುಧಾರಣೆಗೆ ಸಹಕಾರಿಯಾಗಿವೆ, ಅನೇಕ ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದು ತಿಳಿಸಿದರು.
ಇನ್ನೂ, ಯಾವುದೇ ಅರ್ಹರು ಯೋಜನೆಗಳಿಂದ ವಂಚಿತರಾಗಿದ್ದರೆ, ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ಎನ್.ಕೆ. ನದಾಫ್,
ತಾಲೂಕು ಪಂಚಾಯಿತಿ ಇಒ ಸುನಿಲ್ ಮುದ್ದಿನ್,
ಅಕೌಂಟೆಂಟ್ ರಾಮನಗೌಡ ಪಾಟೀಲ,
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶೀಲ್ಪಾ ಹೀರೆಮಠ, ಸದಸ್ಯರಾದ ಕಮಲಾ ಮಕಾಳಿ, ಕಸ್ತೂರಿ ಪೂಜಾರಿ, ಚಂದ್ರಶೇಖರ ಕರಿಗಾರ, ಸಿದ್ದಪ್ಪ ಕುಂಬಾರ, ಮೋತಿಲಾಲ ಲಮಾಣಿ, ಸಿಂಕದರ ಪತ್ತೆಮಮ್ಮದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

