Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ

ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ

ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ
(ರಾಜ್ಯ ) ಜಿಲ್ಲೆ

ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ ಬಳಿ ಶನಿವಾರ ಸಂಜೆ ನಡೆದ ಜಗಳದಲ್ಲಿ 35 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಕ್ಕನೇ ತನ್ನ ಸ್ವಂತ ತಮ್ಮನನ್ನು ಭೀಕರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಹಲಸಂಗಿ ಗ್ರಾಮದ ಬಾಬುಸಾ(ಬಾಬುರಾವ್) ಮಹಾದೇವ ಜಮಾದಾರ (35) ಕೊಲೆಯಾದ ದುರ್ದೈವಿ. ಅವರೊಂದಿಗೆ ಬಂದಿದ್ದ ಸೋಲಾಪುರ ಮೂಲದ ವ್ಯಕ್ತಿ ಅಪ್ಪಾಸಾಹೇಬ ಮಕಾಶಿ ಎಂಬುವವರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೋಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ಹಿನ್ನೆಲೆ:
ಮೃತ ಬಾಬುಸಾ(ಬಾಬುರಾವ್) ಅವರಿಗೆ ಐದು ವರ್ಷಗಳ ಹಿಂದೆ ಅವರ ಸ್ವಂತ ಅಕ್ಕ ಮೀನಾಕ್ಷಿ ಭತಗುಣಕಿ(ತಳವಾರ) ತನ್ನ ಮಗಳು ಸತ್ಯವ್ವಳನ್ನು ಕೊಟ್ಟು ಮದುವೆ ಮಾಡಿಸಿದ್ದರು. ಆದರೆ, ಮದುವೆಯಾದಾಗಿನಿಂದಲೂ ಗಂಡ ಬಾಬುಸಾ(ಬಾಬುರಾವ್) ಹಾಗೂ ಹೆಂಡತಿ ಸತ್ಯವ್ವ ನಡುವೆ ಸಣ್ಣಪುಟ್ಟ ವಿಷಯಗಳಿಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಶನಿವಾರ ಸಂಜೆ ಬಾಬುಸಾ(ಬಾಬುರಾವ್) ಅವರು ಹಲಸಂಗಿ ಕ್ರಾಸ್ ಬಳಿ ಇರುವ ಅಕ್ಕ ಮೀನಾಕ್ಷಿ ಅವರ ಮನೆಗೆ ಹೋಗಿದ್ದ. ಈ ಸಂದರ್ಭದಲ್ಲಿ ಮತ್ತೊಮ್ಮೆ ಕೌಟುಂಬಿಕ ಕಲಹ ತಾರಕಕ್ಕೇರಿದೆ. ಈ ವೇಳೆ ಆಕ್ರೋಶಗೊಂಡ ವಿಕಾಸ್ ಹಾಗೂ ಅಕ್ಕ ಮೀನಾಕ್ಷಿ ಹಾಗೂ ಕುಟುಂಬದವರು ತಮ್ಮನ ಮೇಲೆಯೇ ಹಲ್ಲೆ ನಡೆಸಿದ್ದು, ಪರಿಣಾಮ ಬಾಬುಸಾ(ಬಾಬುರಾವ್) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಎಸ್ಪಿ ಸುಲ್ಪಿ, ಸಿಪಿಐ ಪರುಶುರಾಮ ಮನಗೂಳಿ, ಪಿಎಸ್‌ಐ ಮಂಜುನಾಥ ತಿರಕನ್ನವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ

ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ

ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗದಿರಿ :ಪಿಎಸೈ ಹತ್ತಳ್ಳಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ
    In (ರಾಜ್ಯ ) ಜಿಲ್ಲೆ
  • ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ
    In (ರಾಜ್ಯ ) ಜಿಲ್ಲೆ
  • ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗದಿರಿ :ಪಿಎಸೈ ಹತ್ತಳ್ಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026
    In ದಿನಪತ್ರಿಕೆ
  • ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ
    In ವಿಶೇಷ ಲೇಖನ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.