ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇಲ್ಲಿನ ಭೂತನಾಳದಲ್ಲಿರುವ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಜುಲೈ ೧೭ ರಂದು ಕಟ್ಲಾ ಮತ್ತು ರೋಹು ತಳಿಯ ಮೀನುಮರಿಗಳ ಮಾರಾಟ ವ್ಯವಸ್ಥೆಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರು ಕೇವಲ ೧ ರೂಪಾಯಿಯಂತೆ ರಿಯಾಯಿತಿ ದರದಲ್ಲಿ ಮೀನುಮರಿಗಳನ್ನು ಖರೀದಿಸಬಹುದಾಗಿದೆ ಎಂದು ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರೈತರು ಹಾಗೂ ಮೀನುಗಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆಯೂ ಮೀನುಮರಿಗಳನ್ನು ಖರೀದಿಸಲು ಬರುವವರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಪ್ರತಿಯನ್ನು ತರಲು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : ೯೯೪೫೯೫೯೭೦೪, ೯೯೦೦೭೭೬೨೦೫ ಅಥವಾ ೯೪೮೦೫೧೮೬೭೯ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಭೂತನಾಳ ಕೇಂದ್ರದ ಸಹಾಯಕ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
