ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ ಮತಕ್ಷೇತ್ರದ ರಾಜಕೀಯ ಪಕ್ಷದ ಮುಖಂಡರೊಂದಿಗೆ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು. ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಮಾತನಾಡಿ, ಬಬಲೇಶ್ವರ ಮತಕ್ಷೇತ್ರದ ಒಟ್ಟು ೨,೨೫,೭೭೯ ಮತದಾರರ ಪೈಕಿ ೨,೨೫,೪೨೧ ಮತದಾರರಿಗೆ ಗಣತಿ ನಮೂನೆ ವಿತರಿಸಲಾಗಿದ್ದು, ಶೇ. ೯೯.೮೪ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು. ಮತದಾರರಿಂದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ರುಜು ಪಡೆದು ಮರಳಿ ಬಿ.ಎಲ್.ಓ ತಂತ್ರಾಂಶದಲ್ಲಿ ಗಣಕೀಕರಣಗೊಂಡ ಒಟ್ಟು ೭೭,೧೫೭ ಗಣತಿ ನಮೂನೆಗಳನ್ನು ಸ್ವೀಕರಿಸಲಾಗಿದೆ. ಶೇ. ೩೪.೧೭ ರಷ್ಟು ಪ್ರಗತಿಯಾಗಿದೆ ಎಂದರು.
