ಎಚ್ ಡಿ ಕೋಟೆ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಗಾಯತ್ರಿ ರಾಜೇಗೌಡ ಕರೆ
ಉದಯರಶ್ಮಿ ದಿನಪತ್ರಿಕೆ
ಎಚ್ ಡಿ ಕೋಟೆ: ಅವಳಿ ತಾಲೂಕಿನಲ್ಲಿ ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಪಕ್ಷದ ಬಲವರ್ಧನೆಗೆ ಕೆಲಸ ಮಾಡಬೇಕು ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿ ಕೆ.ಎಂ ಕೃಷ್ಣನಾಯಕ ಅವರನ್ನು ಮುಂದಿನ 2028 ರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಿಸಿ ಶಾಸಕರನ್ನಾಗಿ ಮಾಡುವ ಮೂಲಕ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕೆಂದು ಜೆಡಿಎಸ್ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಗಾಯತ್ರಿ ರಾಜೇಗೌಡ ಕರೆ ನೀಡಿದರು.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಹೆಚ್.ಡಿ. ಕೋಟೆ ಮತ್ತು ಸರಗೂರು ತಾಲೂಕಿನ ಮಹಿಳಾ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
೨೦೨೮ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯ ಗೆಲುವಿಗೆ ನಾವೆಲ್ಲ ಶ್ರಮಿಸಬೇಕಾಗಿದೆ. ಈ ನಿಟ್ಟಿನಲ್ಲಿ ಈಗಿನಿಂದಲೇ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕಾಗಿದೆ. ಇದಕ್ಕೆ ಕಾರ್ಯಕರ್ತರ ಸಹಕಾರ ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ಜೆಡಿಎಸ್ ಜಿಲ್ಲಾಧ್ಯಕ್ಷರಾದ ದ್ರಾಕ್ಷಾಯಿಣಿ ಎಂ.ಡಿ ಮಾತನಾಡಿ, ಹೆಚ್. ಡಿ.ಕೋಟೆಯಲ್ಲಿ ಮಹಿಳಾ ಘಟಕಗಳನ್ನ ಬಲವರ್ಧನೆ ಮಾಡುವ ಮೂಲಕ ಜೆಡಿಎಸ್ ಪಕ್ಷ ಗೆಲ್ಲಿಸಲು ಶ್ರಮ ಹಾಕಬೇಕಾಗಿದೆ ಎಂದು ಹೇಳಿದರು.
ಹೆಚ್. ಡಿ. ಕೋಟೆ ಮತ್ತು ಸರಗೂರು ಜೆಡಿಎಸ್ ಅಧ್ಯಕ್ಷರಾದ ರಾಜೇಂದ್ರ, ಗೋಪಾಲಸ್ವಾಮಿ ಸಭೆಯ ಉದ್ದೇಶದ ಬಗ್ಗೆ ಮಾತನಾಡಿದರು.
ತಾಲೂಕು ಘಟಕದ ಅಧ್ಯಕ್ಷ ಸವಿತಾ, ತಾಲೂಕು ಹೆಚ್. ಡಿ. ಕುಮಾರಸ್ವಾಮಿ ಬಳಗದ ಅಧ್ಯಕ್ಷ ಎಚ್.ಎ ರಮೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಕೃಷ್ಣಾಪುರ ಶಿವಕುಮಾರ್, ಮುಖಂಡರಾದ ಚಿಕ್ಕಮ್ಮ, ರತ್ನಮ್ಮ, ಮೀನಾ ಸುಧಾ, ನಾಗಮಣಿ, ಬಿಂದು, ರಾಜೇಶ್ವರಿ, ಮಾದೇವಿ, ಸಿಂಗಮ್ಮ, ಲಕ್ಷ್ಮಿ, ಪವಿತ್ರ, ರಾಜಮ್ಮ, ಪುಟ್ಟಚೆನ್ನಮ್ಮ, ಶಾಂತಮ್ಮ ಇನ್ನು ಹಲವಾರು ಮಹಿಳೆಯರು ಮತ್ತು ಮುಖಂಡರು ಭಾಗವಹಿಸಿದರು.

