Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
(ರಾಜ್ಯ ) ಜಿಲ್ಲೆ

ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೋಕ್‌ಅದಾಲತ್ ೮೭೯ ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ | ನ್ಯಾಯಾಧೀಶರಾದ ಸಚಿನ್ ಕೌಶಿಕ್ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ನ್ಯಾಯಾಂಗ ವ್ಯವಸ್ಥೆಯಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಹಾಗೂ ಶೀಘ್ರವಾಗಿ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಅವರು ಹೇಳಿದರು.
ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಮಾತನಾಡಿದ ಅವರು ಲೋಕ್ ಅದಾಲತ್ ಮೂಲಕ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳುವುದರಿಂದ ಪಕ್ಷಗಾರರ ಸಮಯ, ಹಣ ಮತ್ತು ಶ್ರಮ ಉಳಿತಾಯವಾಗುತ್ತದೆ. ಅಲ್ಲದೆ, ದೀರ್ಘಕಾಲದ ನ್ಯಾಯಾಂಗ ಪ್ರಕ್ರಿಯೆಯಿಂದ ಉಂಟಾಗುವ ಮಾನಸಿಕ ಒತ್ತಡವೂ ನಿವಾರಣೆಯಾಗುತ್ತದೆ. ಹಾಗಾಗಿ ತಮ್ಮ ಪ್ರಕರಣಗಳನ್ನು ಲೋಕ್‌ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಪಕ್ಷಗಾರರು ಮುಂದೆ ಬರಬೇಕು ಎಂದು ಕರೆ ನೀಡಿದರು.
ಲೋಕ ಅದಾಲತ್ ನಲ್ಲಿ ಮೂರು ನ್ಯಾಯಾಲಯಗಳಿಗೆ ಸಂಬAಧಿಸಿದAತೆ ಒಟ್ಟು ೭೫೩೦ ಬಾಕಿ ಇರುವ ಪ್ರಕರಣಗಳಲ್ಲಿ ೧೯೦೬ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಪೈಕಿ ಒಟ್ಟು ೮೭೯ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅದರಲ್ಲಿ ಅಪರಾಧ ಪ್ರಕರಣಗಳು, ಎಂವಿಸಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೆಂಟೇನೆನ್ಸ್ ಪ್ರಕರಣಗಳು, ಪಾಲು ವಾಟ್ನಿ ದಾವೆಗಳು, ಎಲ್‌ಎಸಿ ಇಪಿ ಪ್ರಕರಣಗಳು, ಎಮ್‌ವಿಸಿ, ಇ.ಪಿ ಪ್ರಕರಣಗಳು, ಅಪರಾಧ ದಂಡ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಯಿತು.
ಪೂರ್ವದಾವೆ ಪ್ರಕರಣಗಳಲ್ಲಿ, ಕಂದಾಯ ಇಲಾಖೆಯ ಕಂದಾಯ ಅದಾಲತ್ ಪ್ರಕರಣಗಳು, ಬಿಎಸ್‌ಎನ್‌ಎಲ್ ಪ್ರಕರಣಗಳು ಹಾಗೂ ಬ್ಯಾಂಕಿನ ಪ್ರಕರಣಗಳು, ಒಟ್ಟು ಸೇರಿ ೯೬೦ ಪ್ರಕರಣಗಳಲ್ಲಿ ೨೭೭ ಪ್ರಕರಣಗಳು ರಾಜಿ ಸಂಧಾನದ ಮೂಲಕ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ೫ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ, ಹಾಗೂ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಮತ್ತು ಸಿವಿಲ್ ನ್ಯಾಯಾಧೀಶರಾದ ರಾಮಮೂರ್ತಿ ಎನ್ ಇವರುಗಳು ರಾಜೀಸಂಧಾನದ ಮೂಲಕ ಇತ್ಯರ್ಥ ಪಡಿಸಿರುತ್ತಾರೆ.
ನ್ಯಾಯಾಂಗ ಸಂಧಾನಕಾರರಾಗಿ ಪಿ.ಬಿ.ಗೌಡರ, ಎಸ್.ಇ.ಹಿರೇಮಠ, ಯು.ಸಿ.ಉರಾನ್ ಭಾಗಿಯಾದರೆ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶಶಿಕಾಂತ ಮಾಲಗತ್ತಿ, ಅಪರ್ ಸರ್ಕಾರಿ ವಕೀಲರಾದ ಎಚ್.ಎಲ್.ಸರೂರ, ನ್ಯಾಯವಾದಿಗಳಾದ ಎನ್.ಜಿ.ಕುಲಕರ್ಣಿ, ಚೇತನ ಶಿವಶಿಂಪಿ, ಎಸ್.ಎಂ.ಕಿಣಗಿ, ರವಿ ನಾಲತವಾಡ, ಐ.ಎಸ್.ಹಗಟಗಿ, ಎಚ್.ಟಿ.ಪೂಜಾರಿ, ಎಂ.ಬಿ.ಬಿರಾದಾರ, ಬಿ.ಎ.ನಾಡಗೌಡರ, ಮಲ್ಲಣ್ಣ ಅಸ್ಕಿ, ಸಿದ್ದಯ್ಯ ಹಿರೇಮಠ, ಎಂ.ಆರ್.ಪಾಟೀಲ, ಪಿ.ಎ.ಹಿರೇಮಠ, ಎಲ್.ಎಸ್.ಮೇಟಿ, ಎನ್.ಆರ್.ಮೊಕಾಶಿ, ನಾಗಭೂಷಣ ನಾವದಗಿ, ಎಸ್.ಆರ್.ಅಮರಣ್ಣವರ, ಎಂ.ಎ.ಲಿAಗಸೂರ, ಪಿ.ಬಿ.ಜಾಧವ, ಆರ್.ಎಸ್.ಬಿರಾದಾರ, ಬಿ.ವಾಯ್.ಮೇಟಿ, ಎನ್.ಎಸ್.ಪಾಟೀಲ, ತಾಲೂಕು ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕರಾದ ಅರವಿಂದ ಕುಂಬಾರ, ದಲಾಯತ್ ಮಹಾಂತೇಶ ಹಚರೆಡ್ಡಿ ನ್ಯಾಯಾಲಯದ ಸಿಬ್ಬಂದಿಗಳಾದ ವಾಯ್.ಎಮ್.ತಳವಾರ, ಜ್ಯೋತಿ ಹಕಾರಿ, ಸುರೇಶ ಬಳಗಾನೂರ, ಎಸ್.ಎಮ್.ಪೂಜಾರಿ, ಗಪೂರ ಜಾಹಗೀರದಾರ, ಬಿ.ಎಂ.ದೊಡ್ಡಮನಿ, ಪುನೀತ್ ಎನ್.ಆರ್, ಬಸವರಾಜ ಬೂದಿಹಾಳ, ಪ್ರಸನ್ನ ಎಸ್, ಅನಸೂಯಾ ಕರಡಿ, ರಾಮಣ್ಣ ಕಮ್ಮಾರ, ನರ್ಮದಾ ಮರೋಳ, ಆನಂದ ಪೂಜಾರಿ, ಗೀತಾ ರಾಂಪುರ್, ಬಿ.ಆರ್.ಕೋರಿ, ರೇಣುಕಾ ಜಾನಮಟ್ಟಿ, ಅಮೀದಾ ನದಾಫ್, ನಿಸಾರ ನೇಗಿನಾಳ, ಮಧು ಧರ್ಮಗಿರಿ, ನಾಗಮ್ಮ ಹೂಗಾರ, ಬಸವರಾಜ ದಡ್ಡಿ ಸೇರಿದಂತೆ ಎಲ್ಲ ಸಿಬ್ಬಂದಿ ಲೋಕ್‌ಅದಾಲತ್ ಗೆ ಶ್ರಮಿಸಿದರು.
ಕೋಟ್:
ಲೋಕ್ ಅದಾಲತ್‌ನಲ್ಲಿ ಉಭಯ ಪಕ್ಷಗಳ ಸಮ್ಮತಿಯೊಂದಿಗೆ ಪ್ರಕರಣಗಳು ಇತ್ಯರ್ಥಗೊಳ್ಳುವುದರಿಂದ ಸಂಬAಧಗಳು ಉಳಿಯುತ್ತವೆ. ಗೆಲುವು-ಸೋಲಿಗಿಂತ ಪರಸ್ಪರ ಸಾಮರಸ್ಯ ಮತ್ತು ಶಾಶ್ವತ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಈ ಕಾರಣದಿಂದ ಸಾರ್ವಜನಿಕರು ಲೋಕ್ ಅದಾಲತ್‌ನ ಸದುಪಯೋಗವನ್ನು ಪಡೆದುಕೊಳ್ಳಬೇಕು.
-ಸಚಿನ್ ಕೌಶಿಕ್. ಅಧ್ಯಕ್ಷರು ತಾಲೂಕು ಕಾನೂನು ಸೇವಾ ಸಮಿತಿ, ಹಾಗೂ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026
    In ದಿನಪತ್ರಿಕೆ
  • ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ
    In (ರಾಜ್ಯ ) ಜಿಲ್ಲೆ
  • ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜ್ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಜಿ.ಪಂ-ತಾ.ಪಂ ಚುನಾವಣೆ: ಅಲ್ಪಸಂಖ್ಯಾತರಿಗೆ‌ ಪ್ರಾತಿನಿಧ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.