ವಿಜಯಪುರ: ವಿಜಯ ದಶಮಿ ಅಂಗವಾಗಿ ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ಮಂಗಳವಾರ ರಾತ್ರಿ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಸಾರ್ವಜನಿಕರೊಂದಿಗೆ ಬನ್ನಿ ವಿನಿಮಯ ಮಾಡಿಕೊಂಡರು.
ನಗರದ ಆರಾಧ್ಯ ದೈವ ಸಿದ್ದೇಶ್ವರನಿಗೆ ಪೂಜೆ ಸಲ್ಲಿಸಿ, ನಾಡಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದ ಶಾಸಕರು, ಪಲ್ಲಕ್ಕಿಯೊಂದಿಗೆ ನೀಲಕಂಠೇಶ್ವರ ದೇವಸ್ಥಾನದ ಬಳಿ ತೆರಳಿ ಬನ್ನಿ ಮುಡಿಯುವ ಕಾರ್ಯದಲ್ಲಿ ಭಾಗಿಯಾದರು. ನಂತರ ಮರಳಿ ಸಿದ್ದೇಶ್ವರ ದೇವಸ್ಥಾನ ಆವರಣಕ್ಕೆ ಆಗಮಿಸಿ, ನಗರವೂ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ ಆಗಮಿಸಿದ್ದ ರೈತರು, ಮುಖಂಡರು, ಅಭಿಮಾನಿಗಳು, ಹಿತೈಷಿಗಳು, ಮಹಿಳೆಯರು, ಮಕ್ಕಳೊಂದಿಗೆ ಬನ್ನಿ ವಿನಿಮಯ ಮಾಡಿಕೊಂಡು ಶುಭಾಶಯ ತಿಳಿಸುವ ಜೊತೆಗೆ ಶ್ರೀ ಸಿದ್ದರಾಮೇಶ್ವರರು ಸುಖ, ಶಾಂತಿ, ಸಮೃದ್ಧಿ ಆರೋಗ್ಯ ದೇವರು ಕರುಣಿಸಲೆಂದು ಹಾರೈಸಿದರು.
ಇದೇ ವೇಳೆ ನಗರದ ವಿವಿಧೆಡೆ ಪ್ರತಿಷ್ಠಾಪಿಸಲಾದ ನಾಡದೇವಿ ದರ್ಶನ ಪಡೆದು, ಪೂಜೆ ಸಲ್ಲಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

