ಉದಯರಶ್ಮಿ ದಿನಪತ್ರಿಕೆ
ಬಾಗಲಕೋಟೆ: ಗದಗ ಜಿಲ್ಲಾ ನಗರದ ಗಾಂಧಿನಗರದ ಸರ್ಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕರು ಹಾಗೂ ದಲಿತ ಸಾಹಿತ್ಯ ಅಕಾಡೆಮಿ ದೆಹಲಿ ಗದಗ ಶಾಖೆಯ ಜಿಲ್ಲಾ ಕಾರ್ಯಾಧ್ಯಕ್ಷರು, ಆದರ್ಶ ಶಿಕ್ಷಕರು ಹಾಗೂ ಸಮಾಜ ಸೇವಕರಾದ ಡಾ.ಶಾಂತಕುಮಾರ ಬಿ. ಭಜಂತ್ರಿ ಅವರು ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ “ನಾಡೋಜ ಡಾ.ಕಯ್ಯಾರ ಸದ್ಭಾವನಾ ಪ್ರಶಸ್ತಿ” 2026 ಗೆ ಆಯ್ಕೆಯಾಗಿದ್ದಾರೆ.
ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮದ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಗುತ್ತದೆ ಎಂದು ಸಮ್ಮೇಳನ ಸಮಿತಿಯ ಅಧ್ಯಕ್ಷ ಡಾ. ಕೆ ಎನ್ ವೆಂಕಟರಮಣ ಹೊಳ್ಳ ಹಾಗೂ ಕಾಸರಗೋಡು ಕನ್ನಡ ಭವನದ ಸಂಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

