Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಲಿಂಗತತ್ವ ನಿಷ್ಠ ಹಡಪದ ಅಪ್ಪಣ್ಣ

ಆಲಮಟ್ಟಿ ಶಾಸ್ತ್ರೀ ಸಾಗರದಿಂದ ಕೆರೆಗಳಿಗೆ ನೀರು ಹರಿಸಿ

ಜಯದ ಮೊದಲ ಹೆಜ್ಜೆ ಧೈರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿ ಶಾಸ್ತ್ರೀ ಸಾಗರದಿಂದ ಕೆರೆಗಳಿಗೆ ನೀರು ಹರಿಸಿ
(ರಾಜ್ಯ ) ಜಿಲ್ಲೆ

ಆಲಮಟ್ಟಿ ಶಾಸ್ತ್ರೀ ಸಾಗರದಿಂದ ಕೆರೆಗಳಿಗೆ ನೀರು ಹರಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿ.ಎಂ. ಡಿ.ಕೆ. ಶಿವಕುಮಾರಗೆ ಮಾಜಿ ಸಚಿವ ಶಿವಾನಂದ ಪಾಟೀಲ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಜನ ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಲಾಲಬಹದ್ದೂರ ಶಾಸ್ತ್ರಿ ಸಾಗರ (ಆಲಮಟ್ಟಿ) ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲು ಆದೇಶ ಮಾಡುವಂತೆ ಬಸವನಬಾಗೇವಾಡಿ ಶಾಸಕರಾದ ಮಾಜಿ ಸಚಿವ ಶಿವಾನಂದ ಪಾಟೀಲ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಶಿವಾನಂದ ಪಾಟೀಲ ಅವರು, ಆಲಮಟ್ಟಿ ಜಲಾಶಯ ಮುಂಗಾರಿನಲ್ಲಿ ಭರ್ತಿಯಾಗದಿದ್ದರೂ ಹಿಂಗಾರಿನಲ್ಲಿ ಭರ್ತಿಯಾಗುವ ವಿಶ್ವಾಸ ಇದೆ. ಜಲಾಶಯ ಹಿಂಗಾರಿನಲ್ಲೂ ಭರ್ತಿಯಾದ ಹಲವು ನಿದರ್ಶನಗಳಿವೆ. ಹೀಗಾಗಿ ಈಗಲೇ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಿದರೆ ಭವಿಷ್ಯದ ದಿನಗಳಲ್ಲಿ ನೀರಿನ ಕೊರತೆಯಾಗಬಹುದು ಎಂದು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.
ಜಲಾಶಯದಲ್ಲಿ ಈಗ ಬಳಸಬಹುದಾದ ನೀರಿನ ಪ್ರಮಾಣ 70 ಟಿಎಂಸಿ ಅಡಿ ನೀರಿದೆ. ಜಲಾಶಯ ಭರ್ತಿಯಾಗಲು 35 ಟಿಎಂಸಿ ಅಡಿ ಅಗತ್ಯವಿದೆ. ಮುಂಗಾರು ಇನ್ನೂ ಮುಗಿದಿಲ್ಲ. ಹೀಗಾಗಿ ಜಲಾಶಯ ಭರ್ತಿಯಾಗುವ ವಿಶ್ವಾಸ ಇದೆ ಎಂದು ವಿವರಿಸಿದ್ದಾರೆ.
ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಯ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ನೀರಾವರಿ ಸಲಹಾ ಸಮಿತಿ ಸಭೆ ಕರೆದು ಚರ್ಚೆ ಮಾಡಿದ ನಂತರ ನೀರು ಹರಿಸುವ ನಿರ್ಧಾರ ಕೈಗೊಳ್ಳುವತನಕ ಕಾದು ಕುಳಿತುಕೊಳ್ಳುವ ಸಮಯ ಇದಲ್ಲ. ಪರಿಸ್ಥಿತಿಯ ಗಂಭೀರತೆ ಹಿನ್ನೆಲೆಯಲ್ಲಿ ತಕ್ಷಣ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಪ್ರತಿ ವರ್ಷ ಜಲಾಶಯ ಭರ್ತಿಯಾದ ನಂತರ ನೂರರಿಂದ ಎರಡು ನೂರು ಟಿಎಂಸಿ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಅಧಿಕಾರಿಗಳು ಜಲಾಶಯಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಇನ್ನೂ ಹರಿದು ಬಂದಿಲ್ಲ ಎಂದು ಕಾಲುವೆಗಳಿಗೆ ನೀರು ಹರಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ವಿವರಿಸಿದ್ದಾರೆ.
ಇನ್ನೂ 10-15 ಟಿಎಂಸಿ ಅಡಿ ನೀರು ಜಲಾಶಯದಲ್ಲಿ ಸಂಗ್ರಹವಾದ ನಂತರ ಕಾಲುವೆಗಳಿಗೆ ನೀರು ಬಿಡಬಹುದು ಎಂಬುದು ಅಧಿಕಾರಿಗಳ ನಿಲುವಾಗಿದೆ. ಆದರೆ ಈ ವಿಳಂಬ ನೀತಿಯಿಂದ ಸರ್ಕಾರ ಜನರ ಆಕ್ರೋಶಕ್ಕೆ ತುತ್ತಾಗಬೇಕಾಗುತ್ತದೆ ಎಂದು ಶಾಸಕರು ಪತ್ರದಲ್ಲಿ ವಿವರಿಸಿದ್ದಾರೆ.
ತಾವು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಹಲವು ಜನಪರ ವಿಚಾರಗಳಲ್ಲಿ ತುರ್ತು ಕ್ರಮಗಳನ್ನು ಕೈಗೊಂಡು ರಾಜ್ಯದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದೀರಿ. ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಯ ಜನ ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ವಿಚಾರದಲ್ಲೂ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.
ಆಲಮಟ್ಟಿ ಜಲಾಶಯ ಹಿಂಗಾರಿನಲ್ಲಾದರೂ ಭರ್ತಿಯಾಗಲಿದ್ದು, ಯಾವುದೇ ಅನುಮಾನದ ಅಗತ್ಯವಿಲ್ಲ. ಹೀಗಾಗಿ ಜಲಾಶಯ ಭರ್ತಿಯಾಗದಿದ್ದರೆ ಮುಂದೆ ಹೇಗೆ? ಎಂದು ಆಲೋಚನೆ ಮಾಡದೆ ತಕ್ಷಣ ಕಾಲುವೆಗಳಿಗೆ ನೀರು ಹರಿಸಲು ಆದೇಶ ಮಾಡಬೇಕು ಎಂದು ಅವರು ಕೋರಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಲಿಂಗತತ್ವ ನಿಷ್ಠ ಹಡಪದ ಅಪ್ಪಣ್ಣ

ಜಯದ ಮೊದಲ ಹೆಜ್ಜೆ ಧೈರ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026

ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಲಿಂಗತತ್ವ ನಿಷ್ಠ ಹಡಪದ ಅಪ್ಪಣ್ಣ
    In ವಿಶೇಷ ಲೇಖನ
  • ಆಲಮಟ್ಟಿ ಶಾಸ್ತ್ರೀ ಸಾಗರದಿಂದ ಕೆರೆಗಳಿಗೆ ನೀರು ಹರಿಸಿ
    In (ರಾಜ್ಯ ) ಜಿಲ್ಲೆ
  • ಜಯದ ಮೊದಲ ಹೆಜ್ಜೆ ಧೈರ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026
    In ದಿನಪತ್ರಿಕೆ
  • ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.