Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
(ರಾಜ್ಯ ) ಜಿಲ್ಲೆ

ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಂತರಸಂತೆ ಯುವಪಡೆಯ ಸಮಾಜಸೇವೆಗೆ ಡಿ.ಸುಂದರ್ ದಾಸ್ ಮೆಚ್ಚುಗೆ

ಉದಯರಶ್ಮಿ ದಿನಪತ್ರಿಕೆ

ಎಚ್ ಡಿ ಕೋಟೆ: ಅಂತರಸಂತೆ ಯುವಪಡೆಯು 4 ವರ್ಷಗಳಲ್ಲಿ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಿದೆ. ಅದರಲ್ಲಿಯೂ ಸಾವಿನ ಮನೆಗೆ ಸಾಂತ್ವನ ಎಂಬ ಕಾರ್ಯಕ್ರಮ ಆಯೋಜಿಸಿ ಗ್ರಾಮದಲ್ಲಿ ಯಾರ ಮನೆಯಲ್ಲಾದರೂ ಸಾವಾದರೆ ಆ ಮನೆಗೆ ಹೋಗಿ ಅಲ್ಲಿ ಒಂದಿಷ್ಟು ಸೇವಾ ಕಾರ್ಯದ ಜತೆಗೆ ಊಟದ ವ್ಯವಸ್ಥೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದು ನಿಜಕ್ಕೂ ಶ್ಲಾಘನೀಯ. ನಾನು ಇಂತಹ ಕಾರ್ಯಕ್ರಮವನ್ನು ಬೇರೆಲ್ಲೂ ನೋಡಿಲ್ಲ. ಇದು ಉತ್ತಮ ಕೆಲಸ ಎಂದು ಕರ್ನಾಟಕ ರಾಜ್ಯ ಬೀಜ ಹಾಗೂ ಸಾವಯವ ಪ್ರಮಾಣನ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸದಸ್ಯ ಡಿ.ಸುಂದರ್ ದಾಸ್ ಹೇಳಿದರು.
ತಾಲೂಕಿನ ಅಂತರಸಂತೆ ಗ್ರಾಮದಲ್ಲಿ ನಡೆದ ಅಂತರಸಂತೆ ಯುವಪಡೆಯ 5ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಯುವ ಸಂಘಟನೆ ಒಂದು ವಿಶೇಷ ಪಡೆಯಾಗಿದೆ. ಇಂತಹ ಸಂಘಟನೆ ಮತ್ತಷ್ಟು ವರ್ಷ ಮುಂದುವರಿಯಲಿ, ಜತೆಗೆ ಊರಿನ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿರಲಿ ಎಂದು ಆಶಿಸಿದರು.
ನಿವೃತ್ತ ಮುಖ್ಯ ಶಿಕ್ಷಕ ಹೆತ್ತೇಗೌಡ ಮಾತನಾಡಿ, ಗ್ರಾಮದಲ್ಲಿ ಯುವಪಡೆ ಸಂಘಟನೆ ಸಕ್ರಿಯವಾಗಿರುವುದು ನಿಜಕ್ಕೂ ಹೆಮ್ಮೆಯ ವಿಚಾರ ಎಂದರು.
ಇದೇ ವೇಳೆ ಡಿ.ಸುಂದರ್ ದಾಸ್, ಹೆತ್ತೇಗೌಡ ಹಾಗೂ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರಾದ ವಿ.ರಾಜಪ್ಪ ಅವರನ್ನು ಯುವಪಡೆಯ ವತಿಯಿಂದ ಸನ್ಮಾನಿಸಲಾಯಿತು.
ಬಳಿಕ 1ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮ ವಿಭಾಗದ ನಿವೃತ್ತ ಮುಖ್ಯಸ್ಥರಾದ ಡಾ.ಎ.ಎಸ್.ಬಾಲಸುಬ್ರಹ್ಮಣ್ಯ ಅವರು ತಮ್ಮ ತಂದೆ-ತಾಯಿ ದಿ.ಎ.ಎಸ್.ಸುಬ್ಬಣ್ಣ-ದಿ.ನಾಗಮ್ಮ ಹೆಸರಿನಲ್ಲಿ ಪ್ರತಿಭಾ ಪುರಸ್ಕಾರ ನೀಡಿದರು.
ಸಿಎ ವ್ಯಾಸಂಗ ಪೂರ್ಣಗೊಳಿಸಿದ ದರ್ಶನ್ ಹಾಗೂ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ವಿನಯ್ ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭ ಯುವ ಮುಖಂಡ ನವೀನ್ ದಾಸ್, ಮೈಸೂರು ಜಿಲ್ಲಾ ಅಮರ ಶಿಲ್ಪಿ ವೇದಿಕೆ ಜಿಲ್ಲಾಧ್ಯಕ್ಷ ಮಹೇಶ್, ಮಹದೇಶ್ವರ ದೇವಸ್ಥಾನ ಸಮಿತಿ ಸಂಚಾಲಕ ಎ.ಪಿ.ಕೃಷ್ಣ, ರಾಜಣ್ಣ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವಿ.ನಾಗರಾಜು, ಬಿಜೆಪಿ ಮುಖಂಡ ಎಲ್ಐಸಿ ಸುಬ್ರಹ್ಮಣ್ಯ, ಪುಟ್ಟಸ್ವಾಮಪ್ಪ, ಎಸ್ ಡಿಎಂಸಿ ಅಧ್ಯಕ್ಷ ಸುಬ್ರಹ್ಮಣ್ಯ, ಅಭಾವೀಲಿಂ ಮಹಾಸಭಾ ಯುವಘಟಕದ ಮಾಜಿ ಅಧ್ಯಕ್ಷ ಅಭಿ ಅಂತರಸಂತೆ, ಮೋಹನ್ ಕುಮಾರ್, ದೇವಣ್ಣ, ಅರ್ಚಕ ಲೋಕೇಶ್, ಬಸವರಾಜು, ಸುರೇಂದ್ರ, ಸತೀಶ್, ಕುಮಾರ್, ಎಂ.ಜಯಣ್ಣ, ನಂದೀಶ್, ಆನಂದ, ಸುಬ್ರಹ್ಮಣ್ಯ ಸೇರಿದಂತೆ ಯುವಪಡೆಯ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂಗತತ್ವ ನಿಷ್ಠ ಹಡಪದ ಅಪ್ಪಣ್ಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.