ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಜಗನ್ನಾಥ್ ಹಲಮಡಗಿ ಅವರು ಜುಲೈ ೧೬ ಮತ್ತು ೧೭ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜುಲೈ ೧೬ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದಲ್ಲಿರುವ ಆಸ್ಪತ್ರೆ, ಶಾಲೆ, ಪೊಲೀಸ್ ಠಾಣೆ, ವಸತಿ ನಿಲಯ, ಅಂಗನವಾಡಿ ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಸಂಜೆ ೪ ಗಂಟೆಗೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಜುಲೈ ೧೭ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೪ ರವರೆಗೆ ಜಿಲ್ಲೆಯ ವಿವಿಧ ಶಾಲೆ, ಆಸ್ಪತ್ರೆ, ಅಂಗನವಾಡಿ ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳ ಪರಿಶೀಲನೆ ನಡೆಸಿ, ನಂತರ ಬಾಗಲಕೋಟೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
