ಕಾನಿಪ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಕಾಶ ಬೆಣ್ಣೂರ ಪತ್ರಿಕಾ ಪ್ರಕಟಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ), ವಿಜಯಪುರ ಜಿಲ್ಲಾ ಘಟಕದಿಂದ ಇದೇ ಜುಲೈ 19 ರಂದು ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರಲ್ಲಿ ಬೆಳಿಗ್ಗೆ 11ಗಂಟೆಗೆ
ಪತ್ರಿಕಾ ದಿನಾಚರಣೆಯನ್ನು ಆಯೋಜನೆ ಮಾಡಲಾಗಿದೆ.
ಜುಲೈ 19 ರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯಾಭಿವೃದ್ದಿ ಸಚಿವ ಎಂ ಬಿ ಪಾಟೀಲ್ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ಧಾರೆ. ಇನ್ನು ಕಾನಿಪ ವಿಜಯಪುರ ಘಟಕದಿಂದ ಕೊಡಮಾಡುವ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಯನ್ನು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪ್ರದಾನ ಮಾಡಲಿದ್ದಾರೆ. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ ಜಿಲ್ಲಾ ಮಟ್ಟದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನಾಗಠಾಣ ಶಾಸಕ ವಿಠಲ ಕಟಕದೊಂಡ ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಆಧ್ಯಕ್ಷತೆಯನ್ನು ಕಾನಿಪ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಯಡಳ್ಳಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ವಿಜಯಪುರ ಮಹಾನಗರ ಪಾಲಿಕೆಯ ಮೇಯರ್ ಎಂ ಎಸ್ ಕರಡಿ, ವಿಜಯಪುರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ ಗಂಗಾಧರ ಸಂಬಣ್ಣಿ ವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ ಸಿ ಲೋಕೇಶ, ರಾಜ್ಯ ಕಾರ್ಯದರ್ಶಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಪುಂಡಲೀಕ ಬಾಳೋಜಿ ಭಾಗಿಯಾಗಲಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಡಾ ಆನಂದ ಕೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತಿ ಸಿಇಓ ರಿಷಿ ಆನಂದ, ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕಾನಿಪ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಕಾಶ ಬೆಣ್ಣೂರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಜಿಲ್ಲಾ ಘಟಕದ ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು, ಸಂಘಟನಾ ಕಾರ್ಯದರ್ಶಿಗಳು, ರಾಷ್ಟ್ರೀಯ ಮಂಡಳಿ ಸದಸ್ಯರು, ಸಲಹಾ ಸಮಿತಿ ಸದಸ್ಯರು ಎಲ್ಲಾ ತಾಲೂಕಾ ಘಟಕದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.
ಜಿಲ್ಲೆಯ ಕಾನಿಪ ಸಂಘದ ಸರ್ವ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳಲಾಗಿದೆ.
ಕಾರ್ಯಕ್ರಮದ ಬಳಿಕ ಪ್ರೀತಿಯ ಭೋಜನದ ವ್ಯವಸ್ಥೆ ಮಾಡಲಾಗಿದೆ.

