Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜಮುಖಿ ಕಾರ್ಯಕ್ಕೆ ಒತ್ತು ನೀಡಿ; ಶೋಷಿತರ ಪರ ಧ್ವನಿ ಎತ್ತಿ
(ರಾಜ್ಯ ) ಜಿಲ್ಲೆ

ಸಮಾಜಮುಖಿ ಕಾರ್ಯಕ್ಕೆ ಒತ್ತು ನೀಡಿ; ಶೋಷಿತರ ಪರ ಧ್ವನಿ ಎತ್ತಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದಲಿತ ಸೇನೆ ಚಡಚಣ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ | ಮಹಾದೇವ ಬನಸೋಡೆ ಕರೆ

ಉದಯರಶ್ಮಿ ದಿನಪತ್ರಿಕೆ

ಚಡಚಣ: ತಾಲೂಕಿನ ಶೋಷಿತರು, ನೊಂದವರು ಹಾಗೂ ಸಮಾಜದ ವಂಚಿತ ವರ್ಗಗಳ ಧ್ವನಿಯಾಗಿ ಕಾರ್ಯನಿರ್ವಹಿಸುವ ಸಂಕಲ್ಪದೊಂದಿಗೆ ದಲಿತ ಸೇನೆ ಚಡಚಣ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಅವರ ಆದೇಶದ ಮೇರೆಗೆ ಹಾಗೂ ವಿಜಯಪುರ ಜಿಲ್ಲಾಧ್ಯಕ್ಷ ಖಾಜು ಹೊಸಮನಿ ಅವರ ನೇತೃತ್ವದಲ್ಲಿ ಚಡಚಣ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ವಿಶೇಷ ಸಭೆಯಲ್ಲಿ ಗುರುವಾರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಹಿರಿಯ ಮುಖಂಡ ಮಹಾದೇವ ಬನಸೋಡೆ, ಸಂಘಟನೆಯಲ್ಲಿ ಜವಾಬ್ದಾರಿ ವಹಿಸಿಕೊಂಡವರು ಹುದ್ದೆಗೆ ಮಾತ್ರ ಸೀಮಿತರಾಗದೆ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ನೊಂದವರು ಹಾಗೂ ತುಳಿತಕ್ಕೊಳಗಾದವರ ಪರವಾಗಿ ನಿರಂತರ ಹೋರಾಟ ನಡೆಸುವ ಮನೋಭಾವ ಬೆಳೆಸಿಕೊಳ್ಳಬೇಕು. ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರನ್ನು ಸಮಾನವಾಗಿ ಕಾಣುವ ಮೂಲಕ ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹೋದರತ್ವವನ್ನು ಬಲಪಡಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧ್ಯಕ್ಷ ಖಾಜು ಹೊಸಮನಿ ಮಾತನಾಡಿ, ಚಡಚಣ ತಾಲೂಕಿನಲ್ಲಿ ದಲಿತ ಸೇನೆಯು ಜನಪರ ಮತ್ತು ಪ್ರಗತಿಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರಬೇಕು ಎಂದರು. ಸಂಘಟನೆಯ ಹೆಸರನ್ನು ವೈಯಕ್ತಿಕ ಸ್ವಾರ್ಥಕ್ಕಾಗಿ ಬಳಸಿಕೊಳ್ಳದೆ, ಸಮಾಜದಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಸಂಘಟನೆಯ ಶಿಸ್ತು, ಘನತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವುದು ಪ್ರತಿಯೊಬ್ಬ ಪದಾಧಿಕಾರಿಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಈ ವೇಳೆ ತಾಲೂಕು ಅಧ್ಯಕ್ಷ ರಮೇಶ ಬೆಳ್ಳೆನವರ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದರು. ಗೌರವಾಧ್ಯಕ್ಷರಾಗಿ ದ್ಯಾಮಗೊಂಡ ಕಾಂಬಳೆ, ಉಪಾಧ್ಯಕ್ಷರಾಗಿ ಚೆನ್ನಪ್ಪ ಕಾಂಬಳೆ,ಪ್ರಧಾನ ಕಾರ್ಯದರ್ಶಿಯಾಗಿ ಭಗವಾನ ಬುದ್ಧ ಬನಸೋಡೆ,ಕಾರ್ಯದರ್ಶಿಗಳು: ಸದಾಶಿವ ಕಾಂಬಳೆ, ಸದಾಶಿವ ಹೊಸಮನಿ,ಸಂಘಟನಾ ಸಂಚಾಲಕರು: ಅನಿಲ ಸರತಾಪೆ, ಗೀರಿಶ ಬನಸೋಡೆ, ನಗರ ಘಟಕ ಅಧ್ಯಕ್ಷ: ಸಂದೇಶ ಬನಸೋಡೆ ಎಂದು ಘೋಷಿಸಿದರು.
ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಸಭೆಯಲ್ಲಿ ಮುಂಬರುವ ದಿನಗಳಲ್ಲಿ ತಾಲೂಕಿನ ಹಳ್ಳಿ-ಹಳ್ಳಿಗಳಿಗೆ ಭೇಟಿ ನೀಡಿ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದು, ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಹಾಗೂ ಸಮಾಜದ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಕುರಿತು ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಬಸವ ಸಮಿತಿ ಅಧ್ಯಕ್ಷ ಮುರುಘೇಂದ್ರ ಸಿಂಪಿ, ಚಂದ್ರಾಮ ಮೇಲಿನಕೇರಿ, ಯಲ್ಲಪ್ಪ ತಳಕೇರಿ ಸೇರಿದಂತೆ ಸಂಘಟನೆಯ ಅನೇಕ ಮುಖಂಡರು, ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.