Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಾದಿತ ಸ್ಥಳದಲ್ಲಿ ತಳವಾರ ಸಮಾಜ ಭವನ :ಕಾಮಗಾರಿ ತಡೆಗೆ ಮನವಿ
(ರಾಜ್ಯ ) ಜಿಲ್ಲೆ

ವಿವಾದಿತ ಸ್ಥಳದಲ್ಲಿ ತಳವಾರ ಸಮಾಜ ಭವನ :ಕಾಮಗಾರಿ ತಡೆಗೆ ಮನವಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸರ್ವೇ ನಂ.೪೮೭ರ ಜಾಗವು ವಿವಾದಿತವಾಗಿದ್ದು, ಅದರ ಬಗ್ಗೆ ಸಂಪೂರ್ಣ ಮಾಹಿತಿ ಸಾರ್ವಜನಿಕರಿಗೆ ತಿಳಿಯದೆಯೇ ಸಮಾಜ ಭವನ ನಿರ್ಮಾಣ ಕಾರ್ಯಕೈಗೊಳ್ಳಲಾಗಿದೆ ಎಂದು ಪತ್ರಕರ್ತ ಸಂಗಮೇಶ ಡಿಗ್ಗಿ ಆರೋಪಿಸಿದ್ದಾರೆ.
ಈ ಸ್ಥಳದ ಸುತ್ತಮುತ್ತ ಸರ್ಕಾರಿ ಶಾಲೆಗಳು, ಆದರ್ಶ ಶಾಲೆ ಹಾಗೂ ವಿದ್ಯಾರ್ಥಿ ವಸತಿ ನಿಲಯಗಳಿದ್ದು, ಇಲ್ಲಿ ಸಮಾಜ ಭವನ ನಿರ್ಮಾಣವಾದರೆ ಸಭೆ-ಸಮಾರಂಭಗಳ ಕಾರಣದಿಂದ ಉಂಟಾಗುವ ಶಬ್ದಮಾಲಿನ್ಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಸಂಗಮೇಶ ಡಿಗ್ಗಿ ತಿಳಿಸಿದ್ದಾರೆ.
ಮನವಿ ಸಲ್ಲಸಿ ಮಾತನಾಡಿದ ಅವರು, ಇದೇ ಜಾಗವನ್ನು ಒಂದು ಸಮುದಾಯಕ್ಕೆ ನೀಡಿದರೆ, ಮುಂದಿನ ದಿನಗಳಲ್ಲಿ ಇತರೆ ಸಮುದಾಯಗಳು ಹಾಗೂ ಧರ್ಮದವರೂ ಸಹ ಭವನ ಅಥವಾ ಧಾರ್ಮಿಕ ಕೇಂದ್ರಗಳಿಗಾಗಿ ಇದೇ ರೀತಿಯ ಬೇಡಿಕೆ ಮುಂದಿಡುವ ಸಾಧ್ಯತೆ ಇದ್ದು, ಇದರಿಂದ ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯಾಗುವ ಆತಂಕ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಜಾತಿ-ಧರ್ಮ ಸಂಬಂಧಿತ ಸಂಘರ್ಷಕ್ಕೆ ಅವಕಾಶ ನೀಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.
ನಗರದಲ್ಲಿ ಸಮುದಾಯ ಭವನ ಅಥವಾ ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸಬೇಕಾದರೆ, ಲೇಔಟ್‌ಗಳಲ್ಲಿರುವ ಸಿ.ಎ.ಸೈಟ್‌ಗಳಲ್ಲಿ ನಿರ್ಮಿಸಬೇಕು. ಸರ್ವೇ ನಂ.೪೮೭ರ ಜಾಗದಲ್ಲಿ ಯಾವುದೇ ಒಂದು ಸಮುದಾಯದ ಭವನ ನಿರ್ಮಿಸುವ ಬದಲು, ವಿಜ್ಞಾನ ಕೇಂದ್ರ ಹಾಗೂ ಸಾರ್ವಜನಿಕ ಗ್ರಂಥಾಲಯ ನಿರ್ಮಿಸಲು ಮೀಸಲಿಡಬೇಕು. ಇದರಿಂದ ಸುತ್ತಮುತ್ತಲಿನ ಶಾಲೆ-ಕಾಲೇಜು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಅನುಕೂಲವಾಗಲಿದೆ. ಕೂಡಲೇ ಕಾಮಗಾರಿಗೆ ತಡೆ ಹಿಡಿಯಬೇಕು. ಜೊತೆಗೆ ಸರ್ವೇ ನಂ.೪೮೭ಕ್ಕೆ ಸಂಬಂಧಿಸಿದ ಸಂಪೂರ್ಣ ದಾಖಲೆ ಹಾಗೂ ಮಾಹಿತಿಯನ್ನು ಒದಗಿಸುವಂತೆ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಮನವಿಯನ್ನು ಸ್ವೀಕರಿಸಿದ ತಹಶೀಲ್ದಾರ್ ಕರೆಪ್ಪ ಬೆಳ್ಳಿ ಮಾತನಾಡಿ, ಸಂಗಮೇಶ ಡಿಗ್ಗಿ ಅವರು ನೀಡಿದ ಸರ್ವೇ ನಂ.೪೮೭ರ ಕಂದಾಯ ಇಲಾಖೆಯ ಜಾಗವನ್ನು ಸಮಾಜ ಕಲ್ಯಾಣ ಇಲಾಖೆಗೆ ಮಂಜೂರು ಮಾಡಲಾಗಿದೆ. ಅವರ ಮನವಿಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕೊಡಿಸುವ ದಿಸೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.

“ಒಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿರುವ ಶಾಸಕರು ಶೈಕ್ಷಣಿಕ ಆವರಣದ ಮಹತ್ವವನ್ನು ಅರಿತುಕೊಳ್ಳಬೇಕಾಗಿತ್ತು. ವಿದ್ಯಾರ್ಥಿಗಳ ಶೈಕ್ಷಣಿಕ ವಾತಾವರಣಕ್ಕೆ ತೊಂದರೆಯಾಗುವ ಸಾಧ್ಯತೆಯಿರುವ ಸ್ಥಳದಲ್ಲಿ ಸಮುದಾಯ ಭವನ ನಿರ್ಮಿಸಲು ಅವಕಾಶ ನೀಡಿರುವುದು ಆಶ್ಚರ್ಯಕರವಾಗಿದೆ. ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಾದ ಜಾಗವನ್ನು ಬಳಸುವ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಗಳ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕಿತ್ತು.”

– ಸಂಗಮೇಶ ಡಿಗ್ಗಿ
ಪತ್ರಕರ್ತ

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.