Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗೋಲಗೇರಿಯ ಡಂಬಳ ಕ್ರಾಸ್‌ನಲ್ಲಿ ಸಿಂದಗಿ ಬಿಜೆಪಿ ಮಂಡಲ ಹಾಗೂ ರೈತರ ನೇತೃತ್ವದಲ್ಲಿ ಬೃಹತ್ ರಸ್ತೆ ತಡೆ ಚಳುವಳಿ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದೆ ನಂಬಿಕೆ ದ್ರೋಹ ಮಾಡಿದೆ. ಮಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ತಕ್ಷಣವೇ ಪ್ರತಿ ಹೆಕ್ಟರ್‌ಗೆ ರೂ.೫೦ ಸಾವಿರ ಬೆಳೆ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ರಮೇಶ ಭೂಸನೂರ ಆಗ್ರಹಿಸಿದ್ದಾರೆ.
ಸಿಂದಗಿ ತಾಲೂಕಿನ ಗೋಲಗೇರಿಯ ಡಂಬಳ ಕ್ರಾಸ್‌ನಲ್ಲಿ ಸಿಂದಗಿ–ಕೊಡಂಗಲ್ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಶೀಘ್ರ ಆರಂಭಿಸಬೇಕು, ಗುತ್ತಿಗೆ ಬಸವಣ್ಣ ಏತ ನೀರಾವರಿ ಯೋಜನೆ ಹಾಗೂ ಇಂಡಿ ಐಬಿಸಿ ಕಾಲುವೆಗಳಿಗೆ ತಕ್ಷಣ ನೀರು ಹರಿಸಬೇಕು ಎಂದು ಆಗ್ರಹಿಸಿ ಸಿಂದಗಿ ಬಿಜೆಪಿ ಮಂಡಲ ಹಾಗೂ ರೈತರ ನೇತೃತ್ವದಲ್ಲಿ ಹಮ್ಮಿಕೊಂಡ ಬೃಹತ್ ರಸ್ತೆ ತಡೆ ಚಳುವಳಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೈತರ ಸಮಸ್ಯೆಗಳ ಬಗ್ಗೆ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸುತ್ತಿದೆ. ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿವೆ. ಸರ್ಕಾರ ನೀಡಿರುವ ಭರವಸೆಗಳು ಈಡೇರಿಲ್ಲ ಎಂದು ಟೀಕಿಸಿದ ಅವರು, ಕಾಂಗ್ರೆಸ್ ಸರಕಾರ ಬುರುಡೆ ಬಿಡುವ ಸರ್ಕಾರ ಎಂದು ವಾಗ್ದಾಳಿ ನಡೆಸಿ ರಾಜ್ಯ ಸರ್ಕಾರದ ಆಡಳಿತ ಕಾರ್ಯ ವೈಖರಿಯನ್ನು ತೀವ್ರವಾಗಿ ಟೀಕಿಸಿದರು.
ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಮಾತನಾಡಿ, ಕೊಡಂಗಲ್ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು. ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಪವಾಸ ಸತ್ಯಾಗ್ರಹ ಸೇರಿದಂತೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ಸಾವಿರಾರು ರೈತರು, ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಗೌಡಣ್ಣ ಆಲಮೇಲ, ಗುರು ತಳವಾರ, ಶರಣು ಮನಗೂಳಿ, ಪ್ರಭುಗೌಡ ಪಾಟೀಲ, ಶ್ರೀಶೈಲ ಚಳ್ಳಗಿ, ಸಿದ್ರಾಮ ಆನಗೊಂಡ, ಪ್ರಶಾಂತ ಕದ್ದರಕಿ, ಅಶೋಕ ನಾರಾಣಪೂರ, ಸೈಪನಸಾಬ ಕೋರವಾರ, ಸಲೀಂ ಭಾಗವಾನ, ಬಾಗೂ ಕೋಟೆಗೋಳ, ಪ್ರಭುಗೌಡ ಪಾಟೀಲ, ಅನಸೂಬಾಯಿ ಪಾರಗೊಂಡ, ಸೇರಿದಂತೆ ಹಲವು ಮುಖಂಡರು, ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.