Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
(ರಾಜ್ಯ ) ಜಿಲ್ಲೆ

೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗುರುವಾರ ಮಧ್ಯಾಹ್ನ ೧೨:೦೦ ಗಂಟೆಯವರೆಗೆ ೨,೫೨,೫೭೦ ಮತದಾರರ ಗಣತಿ ನಮೂನೆಗಳನ್ನು ವಿತರಣೆ ಮಾಡಲಾಗಿದ್ದು, ಅದರಲ್ಲಿ ೭೬,೭೭೭ ಗಣತಿ ನಮೂನೆಗಳು ಡಿಜಿಟೈಜ್ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಹೇಳಿದರು.
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ -೨೦೨೬ ಪ್ರಗತಿ ಕುರಿತಂತೆ ನಗರ ಮತಕ್ಷೇತ್ರದ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆನಲೈನನಲ್ಲಿ ಮತದಾರರು ಸಲ್ಲಿಸಿದ ಒಟ್ಟು ಗಣತಿ ನಮೂನೆಗಳು ೧೯೭೯, ಸಂಗ್ರಹಿಸಲಾಗದ/ಗೈರುಹಾಜರಾದ ಮತದಾರರು ೧೧, ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರು ೪೬೮, ಮರಣ ಹೊಂದಿರುವ ಮತದಾರರು ೮೬೭ ಈಗಾಗಲೇ ನೋಂದಾಯಿಸಿಕೊಂಡ ಮತದಾರರು ೭೩೦ ಮತ್ತು ಇತರೆ ೬೯ ಪ್ರಗತಿಯ ಬಗ್ಗೆ ಮಾಹಿತಿ ನೀಡಲಾಯಿತು.
ಈಗಾಗಲೇ ಶೇ.೮೭ರಷ್ಟು ಮತದಾರರಿಗೆ ಮನೆ ಮನೆಗೆ ತೆರಳಿ ಮತದಾರರ ಗಣತಿ ನಮೂನೆಗಳನ್ನು ವಿತರಿಸಲಾಗಿದೆ. ಗಣತಿ ನಮೂನೆ ತಲುಪದಿರುವ ಮತದಾರರ ಗುರುತಿನ ಚೀಟಿಯ ಮಾಹಿತಿ ಹಾಗೂ ಅವರ ದೂರವಾಣಿ ಸಂಖ್ಯೆಗಳನ್ನು ಸಂಗ್ರಹಿಸಿ ಸಂಬಂಧಪಟ್ಟ ಬಿಎಲ್‌ಒ ಅವರಿಗೆ ನೀಡುವ ಕಾರ್ಯವನ್ನು ಪಾಲಿಕೆಯಿಂದ ಜರುಗಿಸಲಾಗುತ್ತಿದೆ ಎಂದರು.
ನಗರದಲ್ಲಿ ಅನೇಕ ಮತದಾರರು ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿಯನ್ನು ಹೊಂದಿದ್ದು, ಪರಿಶೀಲಿಸಿ ಒಂದು ಕಡೆ ಮಾತ್ರ ಮತದಾನದ ಹಕ್ಕು ಉಳಿಯುವಂತೆ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ರಾಜಕೀಯ ಪಕ್ಷದ ಮುಖಂಡರು ವಿಷಯವನ್ನು ಪ್ರಸ್ತಾಪಿಸಿದರು.
ಒಂದು ವೇಳೆ ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸುಳ್ಳು ಘೋಷಣೆ ಅಥವಾ ಸುಳ್ಳು ಮಾಹಿತಿ ನೀಡಿ ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿಯನ್ನು ಉಳಿಸಿಕೊಂಡಲ್ಲಿ ಸೆಕ್ಷನ್ ೩೧ ರಡಿ ಗರಿಷ್ಠ ೧ ವರ್ಷ ಶಿಕ್ಷೆ ಅಥವಾ ದಂಡ ಎರಡನ್ನು ವಿಧಿಸಲು ಕಾನೂನಿನಲ್ಲಿ ಅವಕಾಶವಿರುತ್ತದೆ ಎಂಬ ವಿಷಯವನ್ನು ಸಭೆಗೆ ತಿಳಿಸಲಾಯಿತು.
ರಾಜಕೀಯ ಪಕ್ಷಗಳು ತಮ್ಮ ಪಕ್ಷದಿಂದ ನೇಮಕವಾದ ಬಿಎಲ್ ಎಗಳಿಂದ ಪ್ರತಿದಿನಮಾಹಿತಿ ನೀಡಲಾಗುವುದು ಎಂದರು.
ಸಂಬಂಧಪಟ್ಟ ಬಿಎಲ್‌ಒಗಳು, ಮನೆಯ ಸದಸ್ಯರು, ಅಕ್ಕಪಕ್ಕದ ನಿವಾಸಿಗಳೊಂದಿಗೆ ಸ್ಥಳ ಮಹಜರ ಮಾಡಿ, ಮಹಜರ್/ಸ್ಥಳ ಪರಿಶೀಲನಾ ವರದಿಗೆ ಅವರ ಸಹಿಯೊಂದಿಗೆ ಕ್ರಮಕೈಗೊಳ್ಳಲ್ಲಿದ್ದಾರೆ ಎಂದು ಆಯುಕ್ತರು ತಿಳಿಸಿದರು.
ಯಾವುದೇ ಅರ್ಹ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಯಾವುದೇ ಅನರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಗೆ ಸೇರದಂತೆ ಕ್ರಮವಹಿಸಲು ಎಲ್ಲ ರಾಜಕೀಯ ಪಕ್ಷಗಳ ಬಿಎಲ್ ಎ ಗಳು ಬಿಎಲ್ ಒ ಗಳಿಗೆ ಸಹಕರಿಸಲು ತಿಳಿಸಲಾಯಿತು.
ನಗರ ಮತಕ್ಷೇತ್ರಗಳಲ್ಲಿ ಒಟ್ಟು ೨೮೫ ಮತಗಟ್ಟೆಗಳಿದ್ದು ಈ ಪೈಕಿ ೭೨ ಮತಗಟ್ಟೆಗಳು ೧೨೦೦ಕ್ಕಿಂತ ಹೆಚ್ಚಿನ ಮತದಾರರಿದ್ದಾರೆ. ಹಾಗಾಗಿ ಸಮೀಪದ ಮತಗಟ್ಟೆಗಳಿಗೆ ಹೆಚ್ಚಿನ ಮತಗಳನ್ನು ವರ್ಗಾಯಿಸಿ ಅವಶ್ಯವಿದ್ದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲು ಸಭೆ ನಿರ್ಧರಿಸಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.