ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರದಲ್ಲಿ ೨೦೨೬-೨೭ನೇ ಸಾಲಿನ ವಿವಿಧ ಸ್ನಾತಕ, ಸ್ನಾತಕೋತ್ತರ, ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿ ಪ್ರಾರಂಭವಾಗಿವೆ.
ಆಸಕ್ತ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತಿತಿತಿ.ಞsoumಥಿsuಡಿu.ಚಿಛಿ.iಟಿ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದಾಗಿದೆ.
ಬಿಪಿಎಲ್ ಮಹಿಳೆಯರು, ಮಾಜಿ ಸೈನಿಕರು, ಆಟೋ ಕ್ಯಾಬ್ ಚಾಲಕರು ಹಾಗೂ ಕೆಎಸ್‌ಆರ್‌ಟಿಸಿ ನೌಕರರಿಗೆ ಶುಲ್ಕ ರಿಯಾಯಿತಿ ನೀಡಲಾಗಿದ್ದು, ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳು, ತೃತೀಯ ಲಿಂಗದವರು ಹಾಗೂ ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಸೌಲಭ್ಯವಿದೆ.
ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಅಥವಾ ಮೊಬೈಲ್ ಸಂಖ್ಯೆ ೯೪೮೩೯೨೦೦೬೫, ೯೧೧೦೨೫೬೭೩೮ ಹಾಗೂ ೭೮೯೨೫೫೦೦೫೩ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
