ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಲೋಕ ಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿರುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ೫೦ ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಮೈಸೂರಿನಲ್ಲಿರುವ ಮುಕ್ತ ವಿಶ್ವವಿದ್ಯಾನಿಲಯದ ಕೇಂದ್ರ ಕಚೇರಿಯಲ್ಲಿ ಈ ತರಬೇತಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ ೨೧ರ ಒಳಗಾಗಿ ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೪:೩೦ರವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ತರಬೇತಿಯ ವಿವರಗಳು ಹಾಗೂ ಹೆಸರು ನೋಂದಣಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ ೦೮೨೧-೨೫೧೫೯೪೪ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವರಾದ ಪ್ರೊ. ನವೀನ್‌ಕುಮಾರ್ ಎಸ್.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
