ಇಂಡಿ: ಲಿಂಬೆ ನಾಡಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಅದಲ್ಲದೇ ಯಾವುದೇ ಲೋಪವಾಗದಂತೆ, ಅರ್ಥಪೂರ್ಣವಾದ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಮತ್ತು ತಾಲೂಕು ಅಧಿಕಾರಿಗಳಿಗೆ ಕೊಟ್ಟ ಜವಾಬ್ದಾರಿ ಹಾಗೂ ಸೂಚಿಸಿದ ಕಾರ್ಯ ಚಟುವಟಿಕೆಗಳು ವ್ಯವಸ್ಥಿತವಾಗಿ ಮಾಡಬೇಕು ಎಂದು ಕಂದಾಯ ಉಪವಿಭಾಗ ಅಧಿಕಾರಿ ಆಬೀದ್ ಗದ್ಯಾಳ ಬುಧವಾರ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ನಿಗದಿಪಡಿಸಿದ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುವುದು. ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ಎತ್ತಿನ ಬಂಡಿಯಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಬಾಬು ಜಗಜೀವನ ರಾಮ್ ವೃತ್ತ, ಬಸವೇಶ್ವರ ವೃತ್ತ, ಮಹಾವೀರ ವೃತ್ತ ಹಾಗೂ ಡಾ ಬಿ ಅರ್ ಅಂಬೇಡ್ಕರ್ ವೃತ್ತದ ಮೂಲಕ ಹಾದು ತಾಲೂಕು ಪೋಲಿಸ್ ಮೈದಾನದಲ್ಲಿ ಕಾರ್ಯಕ್ರಮ ಜರುಗುತ್ತದೆ ಎಂದು ತಿಳಿಸಿದರು.
ಶಾಲಾ ಕಾಲೇಜು ಹಾಗೂ ತಾಲೂಕು ಅಧಿಕಾರಿಗಳಿಂದ ಪ್ರಭಾತ್ ಪೇರಿ ನಡೆಸಲಿದ್ದು, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗುವುದು,
ಕಾರ್ಯಕ್ರಮ ನಡೆಯುವ ಪೋಲಿಸ್ ಮೈದಾನವನ್ನು ಸ್ವಚ್ಛಗೊಳಿಸಿ ತಳಿರು ತೋರಣ ಕಟ್ಟುವ ಜವಾಬ್ದಾರಿಯನ್ನು ಪುರಸಭೆಗೆ ವಹಿಸಲಾಗಿದೆ. ಶಾಮಿಯಾನ, ಧ್ವನಿವರ್ಧಕ, ಕುಡಿಯುವ ನೀರು, ಫೋಟೊ, ವಿಡಿಯೋ ಚಿತ್ರೀಕರಣ ಸೇರಿದಂತೆ ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲವನ್ನೂ ಒಂದೊಂದು ಇಲಾಖೆ ನಿರ್ವಹಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಉಪವಿಭಾಗ ಅಧಿಕಾರಿ ಸೂಚಿಸಿದರು.
ಅಧಿಕಾರಿಗಳ ಗೈರು:
ತಾಲೂಕು ಅಧಿಕಾರಿಗಳು ಪೂರ್ವಭಾವಿ ಸಭೆಗೆ ಮತ್ತು ಕಾರ್ಯಕ್ರಮಕ್ಕೆ ಗೈರು ಹಾಜರಾಗುತ್ತಿದ್ದಾರೆ. ಈ ಬಗ್ಗೆ ಗಮನಕ್ಕೆ ತಂದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಕರವೇ ಅಧ್ಯಕ್ಷ ಬಾಳು ಮುಳಜಿ, ಅಯೂಬ್ ನಾಟೀಕಾರ, ಶಿವು ಮಲಕಗೊಂಡ, ರಾಜು ಪಡಗಾನೂರ, ಚಂದ್ರಶೇಖರ ಹೊಸಮನಿ ಸೇರಿದಂತೆ ಕನ್ನಡ ಪರ ಸಂಘಟನೆಗಳು ಮತ್ತು ಮುಖಂಡರು ದೂರಿದರು.
ಈ ಸಂದರ್ಭದಲ್ಲಿ ಕಸಾಪ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ಇಒ ರಾಠೋಡ, ಸಮಾಜ ಕಲ್ಯಾಣ ಬಿ.ಜೆ.ಇಂಡಿ, ಕೃಷಿ ಇಲಾಖೆ ಮಹಾದೇವ ಏವೂರ, ತೋಟಗಾರಿಕೆ ಎಚ್ ಎಸ್ ಪಾಟೀಲ್, ಡಾ ಜಗದೀಶ್ ಬಿರಾದಾರ, ಕ್ಷೇತ್ರ ಸಮಯನ್ವ ಅಧಿಕಾರಿ ಎಸ್ ಅರ್ ನಡಗೆಡ್ಡಿ, ಕ್ರೀಡಾ ಅಧಿಕಾರಿ ಎ ಎಸ್ ಲಾಳಸೇರಿ, ಎಸ್ ಆರ್ ರುದ್ರವಾಡಿ ಹಾಗೂ ಮುಖಂಡರು
ಮುತ್ತಪ್ಪ ಪೊತೆ, ಸುರೇಶ ಎವೂರ ಉಪಸ್ಥಿತರಿದ್ದರು.
ಶಿರಸ್ತೆದಾರ ಬಸವರಾಜ ಸ್ವಾಗತಿಸಿ, ನಿರೂಪಿಸಿದರು.
Related Posts
Add A Comment