ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಕಂದಗಲ್ ಹಣಮಂತ್ರಾಯ ರಂಗಮಂದಿರದಲ್ಲಿ ಜುಲೈ ೧೯ ರವಿವಾರ ಬೆಳಿಗ್ಗೆ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನು ಕರೆಯಲಾಗಿದೆ.
ಪ್ರಸಕ್ತ ಸಾಲಿನ ಹಣಕಾಸು ವಹಿವಾಟು (ಜಮಾ-ಖರ್ಚು) ಮತ್ತು ಭವಿಷ್ಯದ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು.
ಕಾರಣ ಜಿಲ್ಲೆಯ ಎಲ್ಲ ಕಾನಿಪ ಸಂಘದ ಸದಸ್ಯರು ಸಕಾಲಕ್ಕೆ ಆಗಮಿಸಿ ಅಗತ್ಯ ಸಲಹೆ – ಸೂಚನೆಗಳನ್ನು ನೀಡಬೇಕೆಂದು ಸಂಘದ ಜಿಲ್ಲಾ ಅಧ್ಯಕ್ಷ ಅಶೋಕ ಯಡಳ್ಳಿ, ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮತ್ತು ರಾಜ್ಯ ಕಾರ್ಯಕಾರಿ ಸದಸ್ಯ ಪ್ರಕಾಶ ಬೆಣ್ಣೂರ ಪ್ರಕಟಣೆಯಲ್ಲಿ ಕೋರಿದ್ದಾರೆ.

