ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಇಲ್ಲಿಯ ನಗರಸಭೆಯಲ್ಲಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ವತಿಯಿಂದ ನೂತನ ಶಾಖಾ ಪದಾಧಿಕಾರಿಗಳ ಆಯ್ಕೆ ಸಭೆ ಯಶಸ್ವಿಯಾಗಿ ನಡೆಯಿತು.
ಸಭೆಯಲ್ಲಿ ಸರ್ವಾನುಮತದಿಂದ ಶಾಖಾ ಅಧ್ಯಕ್ಷರಾಗಿ ಕಲ್ಲಪ್ಪ ಚೌರ, ಉಪಾಧ್ಯಕ್ಷರಾಗಿ ಈರಬಸು ಮಾದರ, ಕಾರ್ಯದರ್ಶಿಯಾಗಿ ಜಗದೀಶ ದೊಡ್ಡಮನಿ, ಖಜಾಂಚಿಯಾಗಿ ಅಲ್ತಾಫ್ ಮುಜಾವರ್, ಸಂಘಟನಾ ಕಾರ್ಯದರ್ಶಿಯಾಗಿ ಪರಶುರಾಮ ಜವಳಗಿ, ಸಹ ಸಂಘಟನಾ ಕಾರ್ಯದರ್ಶಿಯಾಗಿ ಅನಿಲ್ ಚೌರ ಹಾಗೂ ಗೌರವಾಧ್ಯಕ್ಷರಾಗಿ ನಬಿರಸೂಲ್ ಉಸ್ತಾದ್ ಅವರನ್ನು ಆಯ್ಕೆ ಮಾಡಲಾಯಿತು.
ಆಯ್ಕೆ ಸಭೆಯಲ್ಲಿ ನಗರಸಭೆ ಪೌರಾಯುಕ್ತ ರವಿ ಸಿರಗುಪ್ಪ, ಕಚೇರಿ ಸಿಬ್ಬಂದಿ ಸಿದ್ದು ಅಂಗಡಿ, ಪರಶುರಾಮ, ಅನಿಲ ಸೇರದಂತೆ ನೀರು ಸರಬರಾಜು ವಿಭಾಗದ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದು, ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಭೀಮಾಶಂಕರ ಕಾಂಬಳೆ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

