Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
(ರಾಜ್ಯ ) ಜಿಲ್ಲೆ

ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಹಿಂದೂ ಧರ್ಮದಲ್ಲಿ ಪ್ರತಿಯೊಂದು ಹಬ್ಬಗಳಿಗೆ ತನ್ನದೇ ಆದ ವೈಶಿಷ್ಟ್ಯತೆ ಮತ್ತು ಸಾಂಪ್ರದಾಯಿಕ ಹಿನ್ನೆಲೆ ಇದೆ. ಆದರೆ ಸಧ್ಯದ ದಿನಮಾನಗಳಲ್ಲಿ ಹಿಂದೂ ಹಬ್ಬಗಳ ಬಗ್ಗೆ ಕಂದಾಚಾರ, ಮೂಢನಂಬಿಕೆ ಎಂದು ಅಪಪ್ರಚಾರವಾಗುತ್ತಿರುವುದರ ಪರಿಣಾಮ ಹಿಂದೂ ಹಬ್ಬಗಳು ನಶಿಸಿ ಹೋಗುತ್ತಿವೆ. ಇಂತಹ ಮಾತುಗಳಿಗೆ ಕಿವಿಗೊಡದೇ ಪ್ರತಿಯೊಬ್ಬ ಹಿಂದೂಗಳು ಪ್ರತಿಯೊಂದು ಹಬ್ಬಗಳಲ್ಲಿ ಭಾಗಿಯಾಗಿ ಹಬ್ಬಗಳ ಹಿಂದೆ ವಿಜ್ಞಾನ ಇದೆ ಎಂದು ಸಮಾಜಕ್ಕೆ ಸಾರಿ ಹೇಳಬೇಕು ಎಂದು ಹೋರಾಟಗಾರ ಮತ್ತು ಹಿಂದು ಕಾರ್ಯಕರ್ತ ಬಸಯ್ಯ ನಂದಿಕೇಶ್ವರಮಠ ಕರೆ ನೀಡಿದರು.
ಪಟ್ಟಣದ ಮಾರುತಿ ನಗರದಲ್ಲಿ ಮಣ್ಣೆತ್ತಿನ ಅಮವಾಸ್ಯೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಮಣ್ಣೆತ್ತು ಪ್ರತಿಷ್ಠಾಪಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ನಮ್ಮ ದೇಶ ಉಳಿಯಲು ಕಾರಣನೇ ಹಿಂದೂ ಹಬ್ಬಗಳು. ಕಾಲ, ಋತು ಮತ್ತು ಕೃಷಿ ಚಟುವಟಿಕೆಗಳಿಗೆ ಅನುಗುಣವಾಗಿ ಹಿಂದೂ ಹಬ್ಬಗಳನ್ನು ಜೋಡಿಸಲಾಗಿದೆ. ಪ್ರತಿಯೊಂದು ಹಬ್ಬಗಳ ಆಚರಣೆಯ ಹಿಂದೆ ಸಾಮಾಜಿಕ ಹಾಗೂ ವೈಜ್ಞಾನಿಕ ಮಹತ್ವ ಅಡಗಿದೆ. ಹಬ್ಬಗಳು ಕುಟುಂಬ ಹಾಗೂ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತವೆ. ಹಿಂದೂ ಸಂಪ್ರದಾಯ ಮತ್ತು ಹಬ್ಬಗಳ ಬಗ್ಗೆ ಯುವ ಜನತೆಗೆ ಅರಿವು ಮೂಡಿಸುವದು ಅಗತ್ಯವಾಗಿದ್ದು, ನಮ್ಮ ಸಂಸ್ಕೃತಿಯ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಹಾಗಾಗಿ ಪ್ರತಿಯೊಬ್ಬ ಹಿಂದೂ ಎಲ್ಲ ಹಬ್ಬಗಳಲ್ಲಿ ಸಕ್ರೀಯವಾಗಿ ಭಾಗಿಯಾಗುವ ಮೂಲಕ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಬೇಕು ಎಂದರು.
ಯುವ ಮುಖಂಡ ಸಂಗನಗೌಡ ಪಾಟೀಲ ಮಾತನಾಡಿ, ಇಂತಹ ಧಾರ್ಮಿಕ ಆಚರಣೆಗಳು ಕೇವಲ ಪೂಜಾ ವಿಧಾನಗಳಿಗೆ ಸೀಮಿತವಾಗಿರದೇ ಸಮಾಜದಲ್ಲಿ ಪರಸ್ಪರ ಸಹಕಾರ, ಬಾಂಧವ್ಯ ಮತ್ತು ಸಾಮರಸ್ಯವನ್ನು ಬೆಳೆಸುವ ವೇದಿಕೆಯಾಗಿವೆ ಎನ್ನುತ್ತ, ಪಟ್ಟಣದಲ್ಲಿಯೇ ಮಾರುತಿ ನಗರ ಶರಣರ ನಾಡಾಗಿದೆ. ಈ ಭಾಗದಲ್ಲಿ ಒಂದು ಭವ್ಯವಾದ ಜಗಜ್ಯೋತಿ ಬಸವಣ್ಣನವರ ದೇವಾಲಯವನ್ನು ನಿರ್ಮಿಸಬೇಕೆನ್ನುವದು ಬಹುತೇಕರ ಆಶಯವಾಗಿದೆ. ನಿಮ್ಮೆಲ್ಲರ ಸಹಕಾರ ಇದ್ದರೆ ಈ ಭಾಗದಲ್ಲಿ ಬಾಗೇವಾಡಿಯಲ್ಲಿರುವ ಬಸವಣ್ಣನವರ ದೇವಸ್ಥಾನದಂತೆ ಅದ್ಭುತ ದೇವಾಲಯವನ್ನು ನಿರ್ಮಿಸಲು ನಾವೆಲ್ಲ ಯುವಕರು ಹಗಲಿರುಳು ಶ್ರಮಿಸಲು ಸಿದ್ಧರಿದ್ದೇವೆ ಎಂದರು.
ಮುಖಂಡ ಮಹಾಂತೇಶ ಮೋಟಗಿ ಮಾತನಾಡಿ, ಹಬ್ಬಗಳು ನಶಿಸಿ ಹೋಗುತ್ತಿರುವ ಹಿನ್ನೆಲೆಯಲ್ಲಿ ಹಬ್ಬಗಳನ್ನು ಪುನಶ್ಚೇತನಗೊಳಿಸಲು ವಾಟ್ಸ್ಅಪ್ ಗುಂಪನ್ನು ತಯಾರಿಸಲಾಗಿದೆ. ಈ ಗುಂಪಿನಲ್ಲಿ ಪ್ರತಿಯೊಂದು ಹಬ್ಬಗಳನ್ನು ಅದ್ಧೂರಿಯಾಗಿಸಲು ಏನೆಲ್ಲ ಪೂರ್ವಸಿದ್ಧತೆ ಮಾಡಬೇಕು ಎನ್ನುವ ಬಗ್ಗೆ ಪೂರ್ವ ಸಮಾಲೋಚನೆ ನಡೆಸಲಾಗುತ್ತದೆ. ಸಭೆ ಕರೆದಾಗ ಪ್ರತಿಯೊಬ್ಬರೂ ಭಾಗಿಯಾಗಿ ಸಲಹೆ ಸೂಚನೆ ನೀಡಬಹುದು ಎಂದರು.
ಪ್ರಮುಖರಾದ ವಿರೇಶ ಢವಳಗಿ, ಮಹಾಂತೇಶ ಬೂದಿಹಾಳಮಠ ಮಾತನಾಡಿದರು. ಮಹಾದೇವ ಶಾಸ್ತಿçಗಳು ಆಶಿರ್ವಚನ ನೀಡಿದರು. ಲಾಲಲಿಂಗೇಶ್ವರ ಮಹಾಸ್ವಾಮಿಗಳು, ಶ್ರೀಕಾಂತ ಹಿರೇಮಠ, ವಿಜು ಸೋನಾರ, ಮಾಂತಗೌಡ ಬಿರಾದಾರ ವಕೀಲರು, ಕಾಶಿನಾಥ ಹುಗ್ಗಿ, ಮಾಜಿ ಸೈನಿಕ ಎಸ.ವಿ.ಹೊಳಿ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಮದ್ಯಪಾನ ತ್ಯಜಿಸಿ, ಉತ್ತಮ ಜೀವನ ನಡೆಸಿ :ಪಿಎಸೈ ಚಿಕ್ಕನಾಯಕ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.