ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ೨೦೨೬-೨೭ನೇ ಸಾಲಿನ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದೆ.
ಈ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು ಜು.೩೧ ಕೊನೆಯ ದಿನವಾಗಿದೆ.
೨೦೨೫ ಸಾಲಿನ ಏಕಲವ್ಯ ಪ್ರಶಸ್ತಿ, ೨೦೨೫ನೇ ಜೀವಮಾನ ಸಾಧನೆ ಪ್ರಶಸ್ತಿ, ೨೦೨೫ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ, ೨೦೨೫ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, ೨೦೨೫ನೇ ಗುರಿ-ಒಲಂಪಿಕ ಪದಕ ಪ್ರಶಸ್ತಿಗೆ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಈ ಪ್ರಶಸ್ತಿಗಳಿಗೆ ನಗದು ಪುರಸ್ಕಾರವಿದೆ.
ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು ಅಧಿಕೃತ ಜಾಲತಾಣ hಣಣಠಿs://sevಚಿsiಟಿಜu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಕಡ್ಡಾಯವಾಗಿ ಆನಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: ೦೮೩೫೨-೨೫೧೦೮೫ ಹಾಗೂ ಮೊ: ೯೫೩೫೫೦೧೮೭೨ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ದೈವಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
