Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

ದೇಶದ ಅಭಿವೃದ್ಧಿಗೆ ಮಾಧ್ಯಮಗಳ ಕೊಡುಗೆ ಅಪಾರ

ಸಿಸಿ ರಸ್ತೆ-ಚರಂಡಿ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಯಮಿತ ಆರೋಗ್ಯ ತಪಾಸಣೆಯಿಂದ ಅಪಾಯ ದೂರ
(ರಾಜ್ಯ ) ಜಿಲ್ಲೆ

ನಿಯಮಿತ ಆರೋಗ್ಯ ತಪಾಸಣೆಯಿಂದ ಅಪಾಯ ದೂರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶ್ರೀ ಶರಣಜ್ಯೋತಿ ವಿದ್ಯಾ ಸಂಸ್ಥೆಯ ಗ್ರಾಮೀಣ ಬಾಲಕಿಯರ ವಸತಿ ನಿಲಯದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ದೀಪಾಕ್ಷಿ ಜಾನಕಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಿಯಮಿತ ಆರೋಗ್ಯ ತಪಾಸಣೆಗಳು ಗಂಭೀರವಾಗಿ ಅನಾರೋಗ್ಯಕ್ಕೆ ಒಳಗಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸುಲಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ
ಶ್ರೀಮತಿ ದೀಪಾಕ್ಷಿ ಜಾನಕಿ ಹೇಳಿದರು.
ನಗರದ ಕೀರ್ತಿ ನಗರದಲ್ಲಿರುವ ಶ್ರೀ ಶರಣಜ್ಯೋತಿ ವಿದ್ಯಾ ಸಂಸ್ಥೆಯ ಗ್ರಾಮೀಣ ಬಾಲಕಿಯರ ವಸತಿನಿಲಯ (ಹಾಸ್ಚೆಲ್) ದಲ್ಲಿರುವ ಬಾಲಕಿಯರಿಗಾಗಿ ಜುಲೈ ೨೦ ಸೋಮವಾರ ಏರ್ಪಡಿಸಿದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಸಂಸ್ಥೆಯ ಅಧಿಕಾರಿಗಳು ನಮ್ಮ ಇಲಾಖೆಯ ಅನುದಾನದ ಸಹಾಯ ಪಡೆದು ಇಲ್ಲಿಯ ಬಾಲಕಿಯರ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಉಪಯುಕ್ತ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಶರಣಜ್ಯೋತಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ದೇವನಗಾಂವ ಮಾತನಾಡಿ, ಮಕ್ಕಳ ಆರೋಗ್ಯ ತಪಾಸಣೆ ಮಾಡುವುದರಿಂದ ಇಲ್ಲಿಯ ಹೆಣ್ಣುಮಕ್ಕಳ ಆರೋಗ್ಯದಲ್ಲಾಗುವ ಬದಲಾವಣೆಗಳ ಕುರಿತು ಅರಿಯಲು ಸಾಧ್ಯವಾಗುತ್ತದೆ. ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುತ್ತದೆ.
ಹೀಗಾಗಿ ಸಂಸ್ಥೆಯಲ್ಲಿ ನಿಯಮಿತವಾಗಿ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲು ಇಲಾಖೆಯ ಅಧಿಕಾರಿಗಳು ಹಿಂದಿನಂತೆ ಮುಂದೆಯೂ ಸಹಕರಿಸಲು
ಮನವಿ ಮಾಡಿಕೊಂಡರು.
ಆರೋಗ್ಯ ಅಧಿಕಾರಿ ಡಾ. ಪಿ.ಎಸ್.ಪಾಟೀಲ ಮಾತನಾಡಿ, ಬಾಲಕಿಯರಿಗೆ ಪೌಷ್ಟಿಕ ಆಹಾರ ಸೇವನೆಯಿಂದಾಗುವ ಪ್ರಯೋಜನಗಳ ಕುರಿತು ವಿವರಿಸಿದರಲ್ಲದೆ ಕರಿದ ಮತ್ತು ಪ್ಯಾಕೆಟ್ ಆಹಾರ ಪದಾರ್ಥಗಳಿಂದ ದೂರವಿರಲು ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀಕ್ಷಕಿ ಶ್ರೀಮತಿ ಅನಿತಾ ಪಾಟೀಲ ಆರೋಗ್ಯದ ವಿಷಯದಲ್ಲಿ ಬಾಲಕಿಯರು ವಹಿಸಬೇಕಾದ ಮುಂಜಾಗ್ರತೆ ಕುರಿತು ಕಿವಿಮಾತು ಹೇಳಿದರು.
ವಸತಿ ನಿಲಯದ ಅಧೀಕ್ಷಕಿ ವಿಜಯಲಕ್ಷ್ಮಿ ಎಂ ದೇವನಗಾಂವ ಅವರು, ಬಾಲಕಿಯರು ಆರೋಗ್ಯದ ಕಾಳಜಿಯೊಂದಿಗೆ ಉತ್ತಮ ಸಂಸ್ಕಾರ ಮತ್ತು ಶಿಸ್ತು ರೂಢಿಸಿಕೊಳ್ಳುವಂತೆ ತಿಳಿ ಹೇಳಿದರು.
ಶಿಬಿರದಲ್ಲಿ ವೈದ್ಯಕೀಯ ಸಿಬ್ಬಂದಿಗಳಾದ ಡಾ. ಪಿ.ಎಸ್.ಪಾಟೀಲ (ಆರೋಗ್ಯಾಧಿಕಾರಿ), ವಾಣಿಶ್ರೀ ಹಿರೇಮಠ (ಎಲ್ಟಿಒ), ರಾಧಾ ಪಾಟೀಲ (ಪಿಎಚ್ಸಿಒ), ಸನಾ ಆಳಂದ (ಎಚೈಒ), ರೂಪಾ ಬಿದರಿ (ಆಶಾ ಕಾರ್ಯಕರ್ತೆ) ಪಾಲ್ಗೊಂಡಿದ್ದರು.
ಶಿಬಿರದಲ್ಲಿ ವಸತಿ ನಿಲಯದ ಒಟ್ಟು ೫೮ ಬಾಲಕಿಯರು ಹಾಗೂ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

ದೇಶದ ಅಭಿವೃದ್ಧಿಗೆ ಮಾಧ್ಯಮಗಳ ಕೊಡುಗೆ ಅಪಾರ

ಸಿಸಿ ರಸ್ತೆ-ಚರಂಡಿ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದರೆ ತಕ್ಷಣ ವರದಿ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ದೇಶದ ಅಭಿವೃದ್ಧಿಗೆ ಮಾಧ್ಯಮಗಳ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
  • ಸಿಸಿ ರಸ್ತೆ-ಚರಂಡಿ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದರೆ ತಕ್ಷಣ ವರದಿ ನೀಡಿ
    In (ರಾಜ್ಯ ) ಜಿಲ್ಲೆ
  • ಲಾಟರಿ, ಡ್ರಗ್ಸ್, ಗಾಂಜಾ, ಜೂಜಾಟಕ್ಕೆ ಖಾಕಿ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಎ.ಬಿ.ಜತ್ತಿ ಪಪೂ ಕಾಲೇಜು ಮಕ್ಕಳಲ್ಲಿ ಚುನಾವಣೆ ಅರಿವು
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಪಡೆದ ವಿಧ್ಯಾರ್ಥಿಗಳ‌ ಸಾಧನೆಯೇ ಹೆಮ್ಮೆ :ಎಸ್.ಜಿ.ನಂದಾ
    In Uncategorized
  • ವಸತಿ ಶಾಲೆ ನಿರ್ಮಾಣಕ್ಕೆ ಮಠದ ಜಮೀನು :ಗ್ರಾಮಸ್ಥರ ವಿರೋಧ
    In (ರಾಜ್ಯ ) ಜಿಲ್ಲೆ
  • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ, ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 21, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.