ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ನಗರದ ಸೌಂದರ್ಯಿಕರಣಕ್ಕೆ ೩೪ ರಸೆಗಳ ಅಭಿವೃದ್ದಿಗೆ ಒಟ್ಟು ರೂ.೨೫ ಕೋಟಿ ಅನುದಾನ ತರಲಾಗಿದ್ದು, ಈ ರಸ್ತೆ ೬ನೇ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ನಗರದ ಪಂಚತಂತ್ರ ಶಾಲೆಯ ಸಮೀಪ ಮುಖ್ಯಮಂತ್ರಿ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ರೂ.೨೦ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರದ ವಿವಿಧ ವಾರ್ಡ್ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು, ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಸಾರ್ವಜನಿಕರ ಸಹಕಾರದೊಂದಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಮಾದರಿ ನಗರವನ್ನಾಗಿ ಅಭಿವೃದ್ಧಿ ಪಡಿಸುವುದು ನನ್ನ ಧ್ಯೇಯವಾಗಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ನಗರದ ಪಂಚತಂತ್ರ ಶಾಲೆ ಮುಂದುಗಡೆ ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ರೂ ೨೦ ಲಕ್ಷ ವೆಚ್ಚದಲ್ಲಿ ಸಿಸಿ ಚರಂಡಿ ಹಾಗೂ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರದಲ್ಲಿ ೫೬ ಸಾವಿರ ಜನಸಂಖ್ಯೆ ಹಾಗೂ ೧೨೬೦೦ ಮನೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನಗರಸಭೆಗೆ ಸದ್ಯ ಇದ್ದ ೫೧ ಸಿಬ್ಬಂದಿಗಳಿಂದ ಸ್ವಚ್ಚತೆ ಕಾರ್ಯ ವಿಳಂ¨ವಾಗಿ ನಡೆಯುತ್ತಿದ್ದು ಇನ್ನೂ ೭೫ ಸಿಬಂದಿ ಭರ್ತಿಗೆ ಮಾಡಿಕೊಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಇನ್ನೂ ಕೆಲವೇ ದಿನಗಳಲ್ಲಿ ಆ ಕಾರ್ಯ ಫಲಿಸಲಿದೆ ಅಲ್ಲಿಯವರೆಗೆ ಸಾರ್ವಜಿನಿಕರು ಸಹಕರಿಸಬೇಕು. ಈ ನಗರದಲ್ಲಿ ಒಟ್ಟು ೧೦೯ ಕಿಮೀ ಒಳರಸ್ತೆಗಳೀಗೆ ಅವುಗಳು ಸಂಪೂರ್ಣ ಹಾಳಾದ ಬಗ್ಗೆ ನನ್ನ ಗಮನಕ್ಕಿದೆ ನನ್ನ ಅವಧಿ ೩ ವರ್ಷವಾಗಿದೆ ಅದರಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ವೇಗ ನೀಡಿ, ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಸೌಕರ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದ ಅವರು, ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪಂಚತಂತ್ರ ಶಾಲೆ ಅಧ್ಯಕ್ಷ ಎನ್.ಜಿ.ಸಜ್ಜನ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಎಂ.ಎ.ಖತೀಬ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಹಣಮಂತ ಸುಣಗಾರ, ಆಶ್ರಯ ಸಮಿತಿ ಸದಸ್ಯ ಭೀಮು ರೋಡಗಿ, ಅರವಿಂದ ಹಂಗರಗಿ, ಸಂದೀಪ ಚೌರ, ವಿಜಯಕುಮಾರ ಸಜ್ಜನ, ರಹಿಮ ಹುಂಡೆಕಾರ, ಮೋಸೀನ ಬೀಳಗಿ, ವರ್ಷಾ ಪಾಟೀಲ, ಜೆಇ ಎ.ಜೆ.ನಾಟೀಕಾರ ಸೇರಿದಂತೆ ಇಲಾಖೆಗಳ ಅಧಿಕಾರಿಗಳು, ಗುತ್ತಿಗೆದಾರರು, ಮುಖಂಡರು ಹಾಗೂ ಸ್ಥಳೀಯ ನಿವಾಸಿಗಳು ಇದ್ದರು.

