ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘ (ರಿ)
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘ (ರಿ)ದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಮೋಹನ ಕುಲಕರ್ಣಿಯವರನ್ನು ನೇಮಕ ಮಾಡಲಾಗಿದೆ ಎಂದು ಸಂಘದ ರಾಜ್ಯ ಅಧ್ಯಕ್ಷ ಎಸ್. ಮಂಜುನಾಥ ನೇಮಕ ಮಾಡಿ ಆದೇಶಿಸಿದ್ದಾರೆ.
ರಾಜ್ಯದಲ್ಲಿ ಸಂಘದ ಬೆಳವಣಿಗೆಗೆ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಹಾಗೂ ಸಂಘದ ಪದಾಧಿಕಾರಿಗಳೊಂದಿಗೆ ನಿಕಟ ಸಂಪರ್ಕ ಇಟ್ಟುಕೊಂಡು ಎಲ್ಲರನ್ನು ಪರಿಗಣನೆಗೆ ತೆಗೆದುಕೊಂಡು ಸಂಘದ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕೆಂದು ಅಧ್ಯಕ್ಷ ಎಸ್.ಮಂಜುನಾಥ ಸೂಚಿಸಿದ್ದಾರೆ.

