Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಹಕಾರ ಸಂಘಗಳು ಉತ್ತಮ ಸೇವೆಯಿಂದ ಅಭಿವೃದ್ಧಿ ಸಾಧಿಸಬೇಕು
(ರಾಜ್ಯ ) ಜಿಲ್ಲೆ

ಸಹಕಾರ ಸಂಘಗಳು ಉತ್ತಮ ಸೇವೆಯಿಂದ ಅಭಿವೃದ್ಧಿ ಸಾಧಿಸಬೇಕು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಸೌಹಾರ್ದ ಸಹಕಾರ ಸಂಘಗಳ ಸಂಪರ್ಕ ಸಭೆಯಲ್ಲಿ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ.ನಂಜಣಗೌಡ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸೌಹಾರ್ದ ಸಹಕಾರ ಸಂಘಗಳು ಸೌಹಾರ್ದ ಕಾಯ್ದೆಯ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸುತ್ತಾ ಸದಸ್ಯರಿಗೆ ಉತ್ತಮ ಸೇವೆ ಒದಗಿಸಿ ಸಂಘಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ. ನಂಜಣಗೌಡ ಕರೆ ನೀಡಿದರು.
ನಗರದಲ್ಲಿ ಜಿಲ್ಲೆಯ ಸೌಹಾರ್ದ ಸಹಕಾರ ಸಂಘಗಳಿಗಾಗಿ ಆಯೋಜಿಸಲಾಗಿದ್ದ “ಸೌಹಾರ್ದ ಸಹಕಾರ ಸಂಘಗಳ ಸಂಪರ್ಕ ಸಭೆ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ನಂಜಣಗೌಡ ಮಾತನಾಡಿ, “ಸಹಕಾರ ಸಂಘದ ಪದಾಧಿಕಾರಿಗಳು ಅತ್ಯಂತ ಜವಾಬ್ದಾರಿಯುತ ಸ್ಥಾನದಲ್ಲಿರುತ್ತಾರೆ. ಸಂಘದಿಂದ ನೀಡಲಾದ ಸಾಲಗಳು ಸಕಾಲದಲ್ಲಿ ಮರುಪಾವತಿಯಾಗದಿದ್ದರೆ ಕಾನೂನಿನ ಪ್ರಕಾರ ನಿರ್ದೇಶಕ ಮಂಡಳಿಯ ಜವಾಬ್ದಾರಿ ನಿಶ್ಚಿತವಾಗುತ್ತದೆ. ಆದ್ದರಿಂದ ಪಾರದರ್ಶಕ ಆಡಳಿತ, ಆರ್ಥಿಕ ಶಿಸ್ತು ಹಾಗೂ ಸದಸ್ಯರಿಗೆ ಗುಣಮಟ್ಟದ ಸೇವೆ ನೀಡುವುದು ಅತ್ಯಗತ್ಯ” ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯ ನಿರ್ದೇಶಕ ಸಂಜಯ್ ಬಿ. ಪಾಟೀಲ ಮಾತನಾಡಿ, ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರ ಸಂಘಗಳ ಜವಾಬ್ದಾರಿ ಹೆಚ್ಚಾಗಿದ್ದು, ಪರಸ್ಪರ ಸಹಕಾರದ ಮನೋಭಾವದಿಂದ ಕಾರ್ಯನಿರ್ವಹಿಸುವ ಮೂಲಕ ಸಹಕಾರ ಚಳವಳಿಯನ್ನು ಇನ್ನಷ್ಟು ಬಲಪಡಿಸಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ಸರ್ಕಾರದ ಮಾಜಿ ಸಚಿವ ಹಾಗೂ ಶ್ರೀ ಸೌಹಾರ್ದ ಸಹಕಾರಿ ಸಂಸ್ಥೆ, ವಿಜಯಪುರ ಅಧ್ಯಕ್ಷ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು, ಸಾಲ ವಿತರಣೆ ಮತ್ತು ವಸೂಲಾತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಿದರೆ ಸಹಕಾರ ಸಂಘಗಳು ಉತ್ತಮ ಅಭಿವೃದ್ಧಿ ಸಾಧಿಸಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯ ಮಾಜಿ ನಿರ್ದೇಶಕ ಹಾಗೂ ಹಾಲಿ ನಿರ್ದೇಶಕ ಸುಭಾಷ್ ಇಂಡಿ ಅವರು ಸಹ ಮಾರ್ಗದರ್ಶನ ನೀಡಿದರು.
ಪ್ರಸ್ತಾವಿಕೆಯನ್ನು ಪ್ರಾದೇಶಿಕ ಅಧಿಕಾರಿ ಬಸವರಾಜ ಹೊಂಗಳ ಅವರು ಮಂಡಿಸಿದರು.
ಪ್ರತಿಭಾ ಮಠ ಅವರು ನಿರೂಪಿಸಿ ವಂದಿಸಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ಬಸವರಾಜ ಎಸ್. ಅವರು ಸ್ವಾಗತಿಸಿದರು.
ಸಭೆಯಲ್ಲಿ ಹಿರಿಯ ಸಹಕಾರಿಗಳಾದ ಅರುಣ ವಾರದ, ಪರಶುರಾಮ ಚಿಂಚಲಿ, ದೀಪಕ್ ಶಿಂತ್ರೆ, ಸಿದ್ದು ಮಲ್ಲಿಕಾರ್ಜುನಮಠ, ಯಮನಪ್ಪ ಸಾತಿಹಾಳ, ಚಡಚಣದ ಚಂದ್ರಶೇಖರ ಪಾಟೀಲ, ತಾಳಿಕೋಟೆಯ ರಾಜು ಹಂಚಾಟೆ, ಸಿಂದಗಿಯ ಆರ್. ಡಿ. ಕುಲಕರ್ಣಿ, ವಿವೇಕಾನಂದ ಶಿರೋಳ್ಕರ್, ಇಂಡಿಯ ಬಿ. ಎಸ್. ಪಾಟೀಲ ಸೇರಿದಂತೆ ಜಿಲ್ಲೆಯ ವಿವಿಧ ಸೌಹಾರ್ದ ಸಹಕಾರ ಸಂಘಗಳ ಪ್ರತಿನಿಧಿಗಳು ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.