Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

“ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ

ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ

ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
(ರಾಜ್ಯ ) ಜಿಲ್ಲೆ

ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೮೦ ಸಾವಿರ ಕೋಟಿ ರೂ. ಅಗತ್ಯ | ೧.೩೩ ಲಕ್ಷ ಎಕರೆ ಭೂಸ್ವಾಧೀನ | ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಆಲಮಟ್ಟಿ ಜಲಾಶಯದ ಎತ್ತರವನ್ನು ೫೧೯.೬೦ ಮೀಟರ್‌ನಿಂದ ೫೨೪.೨೫೬ ಮೀಟರ್‌ಗೆ ಹೆಚ್ಚಿಸಲು ಭೂಸ್ವಾಧೀನ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸುಮಾರು ₹೮೦ ಸಾವಿರ ಕೋಟಿ ಅಗತ್ಯವಿದೆ. ಇದಕ್ಕಾಗಿ ೧.೩೩ ಲಕ್ಷ ಎಕರೆ ಜಮೀನು ವಶಪಡಿಸಿಕೊಳ್ಳಬೇಕಿದೆ. ಮುಂದಿನ ಮೂರು ವರ್ಷಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಜಲಸಂಪನ್ಮೂಲ ಸಚಿವರಾದ ನಂತರ ಮಂಗಳವಾರ ಪ್ರಥಮ ಬಾರಿಗೆ ಆಲಮಟ್ಟಿಗೆ ಭೇಟಿ ನೀಡಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
“ಈ ವರ್ಷ ಸರ್ಕಾರ ₹೩,೦೦೦ ಕೋಟಿ ಅನುದಾನ ಒದಗಿಸಿದೆ. ಇದು ಸಾಂಕೇತಿಕ ಅನುದಾನವಾಗಿದೆ. ಪೂರಕ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಒದಗಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ” ಎಂದರು.
ಕೃಷ್ಣಾ ನೀರು ವಿವಾದ
ಕೃಷಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಮಹಾರಾಷ್ಟ್ರ ತೆಲಂಗಾಣ ಹಾಗೂ ಆಂಧ್ರಪ್ರದೇಶ ರಾಜ್ಯಗಳ ನಡುವೆ ಇರುವ ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಲು ರಾಜ್ಯ ಸರ್ಕಾರ ಸಿದ್ಧವಿದೆ. ಕೇಂದ್ರ ಜಲಶಕ್ತಿ ಸಚಿವರು ಸಂಬಂಧಪಟ್ಟ ರಾಜ್ಯಗಳ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.
ಕೃಷಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಶೀಘ್ರ ಹೊರಡಿಸಲು ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಹೋರಾಟ ಮುಂದುವರಿದಿದೆ. ಮುಖ್ಯಮಂತ್ರಿಯವರೊಂದಿಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಈ ಕುರಿತು ಮತ್ತೊಮ್ಮೆ ಮನವಿ ಮಾಡಲಾಗುವುದು ಎಂದು ಹೇಳಿದರು.
ಇತರೆ ವಿಚಾರಗಳು
ಯುಕೆಪಿ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಯಲ್ಲಿ ವಿಳಂಬವಾಗಿದೆ. ಇದಕ್ಕೆ ಹಿಂದಿನ ಬಿಜೆಪಿ ಸರ್ಕಾರ ಮತ್ತು ಈಗಿನ ಕಾಂಗ್ರೆಸ್ ಸರ್ಕಾರ ಎರಡೂ ಕಾರಣವಾಗಿವೆ. ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಜೇಷ್ಠತೆಯ ಆಧಾರದ ಮೇಲೆ ಪಾವತಿಸಲಾಗುವುದು.
ಆಲಮಟ್ಟಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಹಲವು ಪ್ರಸ್ತಾವನೆಗಳು ಬಂದಿದ್ದು, ಅದಕ್ಕೆ ಆದ್ಯತೆ ನೀಡಲಾಗುವುದು.
ಮುಂಗಾರು ಹಂಗಾಮು
ಯುಕೆಪಿ ಅಚ್ಚುಕಟ್ಟು ಪ್ರದೇಶದ ಮುಂಗಾರು ಹಂಗಾಮಿಗೆ ನೀರು ಹರಿಸಲು ೬೦ ಟಿಎಂಸಿ ಅಡಿ ನೀರು ಅಗತ್ಯವಿದೆ. ಇನ್ನೂ ೨೦ ಟಿಎಂಸಿ ನೀರು ಬಂದರೆ ಮುಂಗಾರು ಹಂಗಾಮಿನಲ್ಲಿ ನೀರಾವರಿಗೆ ನೀರು ಹರಿಸುವ ಬಗ್ಗೆ ಚಿಂತಿಸಲಾಗುವುದು. ಸದ್ಯಕ್ಕೆ ಕುಡಿಯುವ ನೀರಿಗಾಗಿ ಮಾತ್ರ ಕಾಲುವೆಗೆ ನೀರು ಬಿಡಲಾಗಿದೆ ಎಂದು ತಿಳಿಸಿದರು.
ಜುಲೈ ೨೫ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಜೆ.ಟಿ. ಪಾಟೀಲ, ಉಮೇಶ ಮೇಟಿ, ಸಿ.ಎಸ್. ನಾಡಗೌಡ, ಮುಖಂಡರಾದ ನಾಗರಾಜ ಹದ್ಲಿ, ಶ್ರೀಕರ ದೇಸಾಯಿ, ರಾಯಪ್ಪ ಮೇಟಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

“ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ

ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ

ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ

ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • “ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ
    In (ರಾಜ್ಯ ) ಜಿಲ್ಲೆ
  • ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಅದಿವಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಸಿ.ಎನ್.ರಾಜು
    In (ರಾಜ್ಯ ) ಜಿಲ್ಲೆ
  • ಮಗಳ ಜನ್ಮದಿನಕ್ಕೆ ಕಲಿಕೋಪಕರಣ ವಿತರಿಸಿದ ಯೋಧ
    In (ರಾಜ್ಯ ) ಜಿಲ್ಲೆ
  • ತಿಕೋಟಾದಲ್ಲಿ ನೀರಾವರಿ ಯೋಜನೆ ಹೊಸ ಕಚೇರಿಗಳ ಪ್ರಾರಂಭಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜಿಗೆ ಸತತ ೨ನೇ ಸಲ ೪ನೇ ರ‌್ಯಾಂಕ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.