ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿಜಯಪುರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು, ಸಿಂದಗಿ ಇವರ ಸಹಯೋಗದಲ್ಲಿ ಮಂಗಳವಾರ ಸಿಂದಗಿಯಲ್ಲಿ ನಡೆದ “ವಿಜಯಪುರ ಜಿಲ್ಲಾ 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ”ದಲ್ಲಿ
ಡಾ. ಸುರೇಖಾ ರಾಠೋಡ ಅವರಿಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿದೆ.
ಸಾಹಿತ್ಯ ಕ್ಷೇತ್ರಕ್ಕೆ ಡಾ. ಸುರೇಖಾ ರಾಠೋಡ ಅವರು ನೀಡಿದ ಕೊಡುಗೆಯನ್ನು ಗುರುತಿಸಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವಿಜಯಪುರ ವತಿಯಿಂದ ಅವರಿಗೆ ಈ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿಗೆ ಭಾಜನರಾದ ಡಾ. ಸುರೇಖಾ ರಾಠೋಡ ಅವರಿಗೆ ’ಉದಯರಶ್ಮಿ’ ಬಳಗ ಅಭಿನಂದನೆಗಳನ್ನು ಸಲ್ಲಿಸಿದೆ.

