ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಆದರ್ಶ ಸೇವೆ, ಕರ್ತವ್ಯನಿಷ್ಠೆ, ಶಿಸ್ತು, ಬದ್ಧತೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ನೀಡಿರುವ ಅಮೂಲ್ಯ ಕೊಡುಗೆಯನ್ನು ಗೌರವಿಸಿ, ಸಿಂದಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೂವಿನಹಳ್ಳಿಯ ಶಿಕ್ಷಕ ಬಿ.ವಿ. ಹಿರೇಮಠ ಅವರಿಗೆ ‘ಸಿಂದಗಿ ಸಿರಿ ಆದರ್ಶ ಶಿಕ್ಷಕ ಪ್ರಶಸ್ತಿ-೨೦೨೫-೨೬’ ನೀಡಿ ಗೌರವಿಸಲಾಗಿದೆ.
ಕನ್ನಡ ಸಾಹಿತ್ಯ ಗೆಳೆಯರ ಬಳಗ, ಸಿಂದಗಿ ವತಿಯಿಂದ ಶ್ರೀ ರಾಜಶೇಖರ ಕೂಚಬಾಳ ಇವರ ೫೭ನೇ ಹುಟ್ಟುಹಬ್ಬದ ಸಂಭ್ರಮ ಹಾಗೂ ಜನ್ಮದಿನದ ಅಂಗವಾಗಿ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶಿಕ್ಷಣ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿರುವ ಶ್ರೀ ಬಿ.ವಿ. ಹಿರೇಮಠ ಅವರ ಸೇವಾ ಯಾತ್ರೆಯು ಹೀಗೆಯೇ ನಿರಂತರವಾಗಿ ಸಾಗಲಿ ಎಂದು ಕನ್ನಡ ಸಾಹಿತ್ಯ ಗೆಳೆಯರ ಬಳಗದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರೈಸಿ, ಶುಭ ಹಾರೈಸಿದ್ದಾರೆ.

