ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ೨೦೨೬-೨೭ನೇ ಸಾಲಿನ ಸಾಮಾನ್ಯ-ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅರ್ಜಿ ಆಹ್ವಾನಿಸಿದೆ.
ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಸೇವಾಸಿಂಧು Sevಚಿsiಟಿಜhu.ಏಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ಜು. ೨೨ ರಿಂದ ಆ. ೨೦ ರ ಸಂಜೆ ೫.೩೦ ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸರ್ಕಾರದ ಮಾರ್ಗಸೂಚಿಯನ್ನು ಸೇವಾಸಿಂದು :ತಿತಿತಿ.ಏಚಿಟಿಟಿಚಿಜಚಿsiಡಿi.ಏಚಿಡಿಟಿಚಿಣಚಿಞಚಿ.gov.iಟಿ ಪೋರ್ಟಲ್ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೦-೨೪೪೧೦೫೭೪, ೦೮೦೨೨೨೧೩೫೩೦, ೯೯೮೬೮೩೭೦೩೭, ೦೮೦೨೨೨೪೧೩೨೫, ವಿಜಯಪುರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯ ದೂರವಾಣಿ ಸಂಖ್ಯೆ: ೦೮೩೫೨-೨೫೧೨೬೧ ಮತ್ತು ವಿಜಯಪುರ ಜಿಲ್ಲೆಯ ವ್ಯವಸ್ಥಾಪಕರು, ಸೇವಾಸಿಂಧು ಇವರನ್ನು ಸಂಪರ್ಕಿಸಬಹುದಾಗಿದೆ.
ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ. ಸೇವಾ ಸಿಂಧುಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
