Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ

ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ

ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ
(ರಾಜ್ಯ ) ಜಿಲ್ಲೆ

ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಮಖಂಡಿ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯಲ್ಲಿ ಅಗ್ನಿಶಾಮಕ ದಳದ ಅಣುಕು ಪ್ರದರ್ಶನ

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: “ಅಗ್ನಿ ಅವಘಡಗಳು ಹೇಳಿ ಬರುವುದಿಲ್ಲ; ಆದರೆ ಮುನ್ನೆಚ್ಚರಿಕೆ ಮತ್ತು ಸಮಯಪ್ರಜ್ಞೆ ಇದ್ದರೆ ಅಪಾಯವನ್ನು ತಪ್ಪಿಸಬಹುದು” ಎಂಬ ಸಂದೇಶವನ್ನು ಸಾರುವ ಉದ್ದೇಶದಿಂದ ಜಮಖಂಡಿಯ ಪ್ರತಿಷ್ಠಿತ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಅಗ್ನಿ ನಂದಿಸುವ ವಿಧಾನಗಳ ಅಣುಕು ಪ್ರದರ್ಶನ ಹಾಗೂ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಮಖಂಡಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಎಂ.ಎಸ್. ಹೂಗಾರ, “ಅಗ್ನಿ ಅವಘಡ ಸಂಭವಿಸಿದಾಗ ಗಾಬರಿಯಾಗದೇ ಧೈರ್ಯದಿಂದ ಸೂಕ್ತ ಕ್ರಮ ಕೈಗೊಂಡರೆ ಜೀವಹಾನಿ ಹಾಗೂ ಆಸ್ತಿಪಾಸ್ತಿಯ ನಷ್ಟವನ್ನು ಬಹುಮಟ್ಟಿಗೆ ತಡೆಯಬಹುದು. ಪ್ರತಿಯೊಬ್ಬ ವಿದ್ಯಾರ್ಥಿಯೂ ಅಗ್ನಿ ಸುರಕ್ಷತೆಯ ಮೂಲಭೂತ ಜ್ಞಾನ ಹೊಂದಿರುವುದು ಇಂದಿನ ಅಗತ್ಯವಾಗಿದೆ” ಎಂದು ಹೇಳಿದರು.
ಮನೆಗಳಲ್ಲಿ ಅಡುಗೆ ಅನಿಲ (LPG) ಸೋರಿಕೆಯಾದಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾಗುವ ಬೆಂಕಿಯನ್ನು ನಿಯಂತ್ರಿಸುವ ವಿಧಾನಗಳು ಹಾಗೂ ಅಗ್ನಿ ನಂದಿಸುವ ಉಪಕರಣಗಳ ಬಳಕೆಯ ಕುರಿತು ಸಿಬ್ಬಂದಿ ಪ್ರಾಯೋಗಿಕ ಅಣುಕು ಪ್ರದರ್ಶನದ ಮೂಲಕ ವಿವರಿಸಿದರು. ಪ್ರದರ್ಶನವನ್ನು ವಿದ್ಯಾರ್ಥಿಗಳು ಕುತೂಹಲದಿಂದ ವೀಕ್ಷಿಸಿ ಅಗ್ನಿ ಸುರಕ್ಷತೆ ಕುರಿತ ಅನೇಕ ಮಾಹಿತಿಗಳನ್ನು ತಿಳಿದುಕೊಂಡರು.
ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ವೀರಭದ್ರಪ್ಪ ಮೆಂಡಗುದ್ಲಿ ಮಾತನಾಡಿ, “ಶಿಕ್ಷಣದ ಜೊತೆಗೆ ಜೀವನ ಕೌಶಲ್ಯ ಮತ್ತು ಸುರಕ್ಷತಾ ಅರಿವು ವಿದ್ಯಾರ್ಥಿಗಳಿಗೆ ಅತ್ಯಂತ ಅವಶ್ಯಕ ಎಂದರು.
ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಪ್ರಾಚಾರ್ಯ ಡಾ. ರಾಜಾಗೌಡ ಕಾಗವಾಡೆ, “ಅಪಘಾತವನ್ನು ಎದುರಿಸುವುದಕ್ಕಿಂತ ಅದನ್ನು ತಡೆಗಟ್ಟುವ ಜಾಗೃತಿ ಬೆಳೆಸುವುದು ಶ್ರೇಷ್ಠ ಎಂದರು.
ಈ ಸಂದರ್ಭದಲ್ಲಿ ನರ್ಸಿಂಗ್ ಕಾಲೇಜು ಹಾಗೂ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ವೃಂದ, ಅಗ್ನಿಶಾಮಕ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ

ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ

ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ

ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ
    In (ರಾಜ್ಯ ) ಜಿಲ್ಲೆ
  • ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ
    In (ರಾಜ್ಯ ) ಜಿಲ್ಲೆ
  • ಕೂಲಿಕಾರರು ವಲಸೆ ಹೋಗುವ ಅಗತ್ಯವಿಲ್ಲ :ಇಓ ಅಗ್ನಿ
    In (ರಾಜ್ಯ ) ಜಿಲ್ಲೆ
  • “ನಿಸರ್ಗ ಪ್ರೀಯರ ರಮಣೀಯ ತಾಣ ಸಾವಳಗಿ ಗುಡ್ಡ
    In (ರಾಜ್ಯ ) ಜಿಲ್ಲೆ
  • ದಾಸೋಹ, ದಾನ-ಧರ್ಮ ಸಂಸ್ಕೃತಿ, ಸಂಸ್ಕಾರ ಅಗತ್ಯ :ಶಾಸಕ ಯತ್ನಾಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.