Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
(ರಾಜ್ಯ ) ಜಿಲ್ಲೆ

ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಣದ ಆಮಿಷವೊಡ್ಡಿ ಸೂಪರ್ ಸೀಡ್ ಮಾಡಲು ಯತ್ನ | ಟಿ ವೆಂಕಟೇಶ್ ಗಂಭೀರ ಆರೋಪ

ಉದಯರಶ್ಮಿ ದಿನಪತ್ರಿಕೆ

ಎಚ್ ಡಿ ಕೋಟೆ: ತಾಲೂಕಿನಿಂದ ತಾಲೂಕಿನಗೆ ಬಂದು ಶಾಸಕ ಅನಿಲ್ ಚಿಕ್ಕಮಾದು ಹಣ ದಂದೆಯಲ್ಲಿ ನಿರತರಾಗಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡು 3 ಲಕ್ಷದವರೆಗೂ ಬಡ್ಡಿ ರಹಿತ ಸಾಲ ನೀಡುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸೂಪರ್ ಸೀಡ್ ಮಾಡುವ ಮೂಲಕ ಅವುಗಳನ್ನು ನಿಷ್ಕ್ರಿಯಗೊಳಿಸಿ , ರೈತರಿಗೆ ಮೋಸ ಮಾಡುತ್ತಿದ್ದಾರೆ. ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಅಧಿಕಾರ ದುರುಪಯೋಗ ಮಾಡಲು ನಾವು ಬಿಡುವುದಿಲ್ಲ. ಟಿಎಪಿಸಿಎಂಎಸ್ ನ ೮ ಸ್ಥಾನಗಳಲ್ಲೂ ( ಬಿಜೆಪಿ -೦೫, ಜೆಡಿಎಸ್ -೦೩) ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ನಿಮಗೆ ತಕ್ಕಪಾಠ ಕಳಿಸುತ್ತಾರೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಟಿ ವೆಂಕಟೇಶ್ ವಾಗ್ದಾಳಿ ನಡೆಸಿದರು.
ತಾಲೂಕಿನ ಗಂಗಡಹೊಸಹಳ್ಳಿಯಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಮತಯಾಚನೆ ಬಳಿಕ ಮಾತನಾಡಿದ ಅವರು, ಶಾಸಕ ಅನಿಲ್ ಚಿಕ್ಕಮಾದುಗೆ ಪಾಪದ ಕೊಡ ತುಂಬಿದೆ. ರೈತರಿರುವ ಸೊಸೈಟಿ ಚುನಾವಣೆಗಳಲ್ಲೂ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಶಾಸಕರ ಜವಾಬ್ದಾರಿ ಮರೆತು, ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಮುಂದಾಗಿದ್ದಾರೆ. ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆಯಲ್ಲೂ ಮತ ಚಲಾಯಿಸದಂತೆ ಮಾದಾಪುರ ಹಾಗೂ ಹೆಚ್ ಡಿ ಕೋಟೆ ಪ್ರಾಥಮಿಕ ಕೃಷಿ ಪತ್ತಿನ ಸಂಘ ಸೂಪರ್ ಸೀಡ್ ಮಾಡಲು ಹೋಗಿ ನ್ಯಾಯಾಲಯದಲ್ಲಿ ಮುಖಭಂಗ ಅನುಭವಿಸಿದ್ದಾರೆ. ಇದೀಗ ಮನುಗನಹಳ್ಳಿ, ಕ್ಯಾತನಹಳ್ಳಿ, ಚಕ್ಕೂರು ಸೊಸೈಟಿಗಳಲ್ಲೂ ಡೆಲಿಗೇಟ್ ಗಳನ್ನು ವಜಾಮಾಡಲು ಮುಂದಾಗಿದ್ದೀರಿ, ಇದು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಎರಡು ಬಾರಿ ನೀವು ತಂದೆ ಸಾವಿನ ಅನುಕಂಪದಿಂದ ಗೆದ್ದಿದ್ದೀರಿ, ಮುಂಬರುವ ಚುನಾವಣೆಯಲ್ಲಿ ಸೋಲು ಅನುಭವಿಸುತ್ತೀರಿ. ಮತದಾರರು ನಿಮ್ಮನ್ನು ಮನೆಗೆ ಕಳಿಸುತ್ತಾರೆ, ಹೋಗಲು ರೆಡಿಯಾಗಿರಿ ಎಂದು ವೆಂಕಟೇಶ್ ಭವಿಷ್ಯ ನುಡಿದರು.
ಜೆಡಿಎಸ್ ಮುಖಂಡ ಯತೀಶ್ ಕುಮಾರ್ ಮಾತನಾಡಿ, ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ-ಜೆಡಿಎಸ್ ಒಟ್ಟಾಗಿ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ ಎದುರಿಸುತ್ತಿದ್ದೀವಿ. ಇದನ್ನ ಸಹಿಸಲಾರದೆ ಶಾಸಕ ಅನಿಲ್ ಚಿಕ್ಕಮಾದು ಹಿಂಬಾಗಿಲಿನ ರಾಜಕಾರಣ ಮಾಡುತ್ತಿದ್ದಾರೆ. ಕ್ಯಾತನಹಳ್ಳಿ, ಮನುಗನಹಳ್ಳಿ ಸೊಸೈಟಿಗಳಲ್ಲಿ ಎನ್ ಡಿಎ ಬೆಂಬಲಿತ ಡೆಲಿಗೇಟ್ ಗಳಿಗೆ ಹಣದ ಆಮಿಷವೊಡ್ಡಿ, ಬಲವಂತವಾಗಿ ರಾಜೀನಾಮೆ ಕೊಡಿಸುವ ಮೂಲಕ ಸೂಪರ್ ಸೀಡ್ ಮಾಡಲು ಮುಂದಾಗಿದ್ದಾರೆ. ಶಾಸಕರು ನೇರವಾಗಿ ರಾಜಕೀಯ ಮಾಡೋದನ್ನು ಬಿಟ್ಟು, ಈ ರೀತಿಯ ಕೀಳುಮಟ್ಟದ ರಾಜಕಾರಣ ಮಾಡುತ್ತಿರುವುದು ತಾಲೂಕಿನ ಇತಿಹಾಸದಲ್ಲೇ ಇದೆ ಮೊದಲು ಎಂದು ಆರೋಪಿಸಿದರು.
ಈ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ರಾಜೇಂದ್ರ, ಗುಂಡತ್ತೂರು ಪ್ರಕಾಶ್, ಮೊತ್ತ ಬಸವರಾಜಪ್ಪ, ಗುರುಸ್ವಾಮಿ, ಯತೀಶ್ ಕುಮಾರ್, ಪ್ರಕಾಶ್ ಗಂಗಡ ಹೊಸಹಳ್ಳಿ, ಅರವಿಂದ, ನವೀನ್, ಪ್ರಕಾಶ್, ಕೃಷ್ಣೇಗೌಡ, ಕುನ್ನೇಗೌಡ, ನೂರ್ ಮಹಮ್ಮದ್ , ಭುಜಂಗನಾಯಕ, ಮಾದಯ್ಯ, ವೈಲಾ, ಶಿವಮಲ್ಲಪ್ಪ, ಶುಭಮಂಗಳ ಸೇರಿದಂತೆ ಬಿಜೆಪಿ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ
    In (ರಾಜ್ಯ ) ಜಿಲ್ಲೆ
  • ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ
    In (ರಾಜ್ಯ ) ಜಿಲ್ಲೆ
  • ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಯುರ್ವೇದವು ಗ್ರಾಮಗಳಿಗೂ ತಲುಪಲಿ :ಡಾ.ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ೨೧ ದಿನಗಳ ರೈತರ ಧರಣಿ ಹಿಂಪಡೆತ
    In (ರಾಜ್ಯ ) ಜಿಲ್ಲೆ
  • ಸೆ.೨೮ ರಂದು ರಾಠೋಡ ಜಾತ್ರಾಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಪಾತ್ರ ಮಹತ್ವದ್ದು :ಕೋಳಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.