ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಡಾ.ಫ.ಗು.ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಬಿ.ಎಂ.ಪಾಟೀಲ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ ದಿ.27 ಸೋಮವಾರ ಬೆ.10ಗಂ. ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ಗ್ರಂಥಾಲಯ ಸಭಾಂಗಣದಲ್ಲಿ ಚಿಂತನ-ಸಾಂಸ್ಕೃತಿಕ ಬಳಗದ ವತಿಯಿಂದ ಆಯೋಜಿಸಲಾಗಿದೆ.
ಶಿವಮೊಗ್ಗ ಬೆಕ್ಕಿನ ಕಲ್ಮಠ ಮ.ನಿ.ಪ್ರ.ಸ್ವ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಬೆಳಗಾವಿ ಕೆ.ಎಲ್.ಇ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ.ಅವಿನಾಶ ಕವಿ ಅವರು ಅರಿವಿನ ಕುರುಹು, ಇಷ್ಟಲಿಂಗ – ವೈಜ್ಞಾನಿಕ ಒಳನೋಟ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕೈಗಾರಿಕೆ ಸಚಿವ, ಬಿ.ಎಲ್.ಡಿ.ಇ ಅಧ್ಯಕ್ಷ ಎಂ.ಬಿ.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಚಿಂತನ ಬಳಗ ಕಾರ್ಯದರ್ಶಿ ಡಾ.ಮಹಾಂತೇಶ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
