ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.), ವಿಜಯಪುರ ಜಿಲ್ಲಾ ಘಟಕದ ವತಿಯಿಂದ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ನೀಟ್ (NEET) ಪರೀಕ್ಷೆ ವಿರೋಧಿ ಬೃಹತ್ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಜಿಲ್ಲಾಧ್ಯಕ್ಷ ನಾಗರಾಜ ಕಬಾಡೆ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮನವಿಯಲ್ಲಿ, ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ದೇಶದಾದ್ಯಂತ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳು ವ್ಯಕ್ತಪಡಿಸುತ್ತಿರುವ ಆತಂಕವನ್ನು ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿಗಳಿಗೆ ಸಮಾನ ಶಿಕ್ಷಣದ ಅವಕಾಶ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಕಬಾಡೆ, ಪದಾಧಿಕಾರಿಗಳಾದ ವಿಜಯಕುಮಾರ ನಿಮಾದಾರ, ಕಿರಣಕುಮಾರ ಅಲಿಯಾಬಾದ ರಾಘವೇಂದ್ರ ಕಾಸೆ, ನೀಲಾಂಬಿಕಾ ಕಟ್ಟಿಮನಿ, ಶಿಲ್ಪಾ ಮೇತ್ರಿ, ಅಬ್ದುಲ್ ಹಕ್ ಇನಾಮದಾರ ಸೇರಿದಂತೆ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

