ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಅಧಿಕಾರ ಪದಗ್ರಹಣ ಮತ್ತು ಮೊದಲ ಕಾರ್ಯಕಾರಿ ಸಮಿತಿ ಸಭೆಯನ್ನು ಇದೇ ದಿನಾಂಕ : ೨೬ ರಂದು ರವಿವಾರ ಜಗರುಗಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಷಾ ಮಂಜುನಾಥ ಹಾಗೂ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ ೧೦ ಘಂಟೆಗೆ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಾಲಯದ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಸಂಘದ ಕೋಶಾಧ್ಯಕ್ಷ ಎಚ್.ಎಲ್. ಸುರೇಶ ಅವರು ಸದಸ್ಯತ್ವ ಸ್ವೀಕರಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಲಾಗುವುದು.
ಈ ಸಂಘದಲ್ಲಿ ಸದಸ್ಯರಾಗಬಯಸುವವರು ಮಾಧ್ಯಮ ಪಟ್ಟಿಯಲ್ಲಿರುವ ಸಂಪಾದಕರು ೧೧೦೦.೦೦ ರೂ. ಶುಲ್ಕನೀಡಿ ಸದಸ್ಯರಾಗಬಹುದು ಎಂದು ತಿಳಿಸಿದ್ದಾರೆ.
ಸಂಘದ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುವುದು.
ಕಾರಣ ಮಾಧ್ಯಮ ಪಟ್ಟಿಯಲ್ಲಿರುವ ಸಂಪಾದಕರು ಸಭೆಗೆ ಆಗಮಿಸಿ ಕಾರ್ಯಕ್ರಮಕ್ಕೆ ಶೋಭೆ ತರಬೇಕೆಂದು ಅವರು ಕೋರಿದ್ದಾರೆ.
